ಪರಿಹಾರ ನೀಡದ ಕೇಂದ್ರ: ರಾಜ್ಯ ಸರ್ಕಾರದಿಂದ ರೂ.1500 ಕೋಟಿ ನೆರೆ ನೆರವು ಬಿಡುಗಡೆ

ನೆರೆಯಿಂದ ರಾಜ್ಯ ತತ್ತರಗೊಂಡಿದ್ದರೂ, ರಾಜ್ಯಕ್ಕೆ ಪರಿಹಾರ ನೀಡುವ ಯಾವುದೇ ಸುಳಿವನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ಇದರ ನಡುವಲ್ಲೇ ರಾಜ್ಯ ಸರ್ಕಾರ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಮನೆ ನಿರ್ಮಾಣ ಮಾಡುವುದಕ್ಕಾಗಿ ರೂ.1,000 ಕೋಟಿ ಮತ್ತು ರಸ್ತೆಗಳ ದುರಸ್ತಿ ಮಾಡಲು ಲೋಕೋಪಯೋಗಿ ಇಲಾಖೆಗೆ ರೂ.500 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನೆರೆಯಿಂದ ರಾಜ್ಯ ತತ್ತರಗೊಂಡಿದ್ದರೂ, ರಾಜ್ಯಕ್ಕೆ ಪರಿಹಾರ ನೀಡುವ ಯಾವುದೇ ಸುಳಿವನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ಇದರ ನಡುವಲ್ಲೇ ರಾಜ್ಯ ಸರ್ಕಾರ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಮನೆ ನಿರ್ಮಾಣ ಮಾಡುವುದಕ್ಕಾಗಿ ರೂ.1,000 ಕೋಟಿ ಮತ್ತು ರಸ್ತೆಗಳ ದುರಸ್ತಿ ಮಾಡಲು ಲೋಕೋಪಯೋಗಿ ಇಲಾಖೆಗೆ ರೂ.500 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ. 

ವಿಧಾನಸೌಧದಲ್ಲಿ ಬುಧವಾರ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿಯವರು, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಳ್ಳಲು ರೂ.5 ಲಕ್ಷ ನೀಡಲಾಗುವುದು. ಇದಕ್ಕಾಗಿ ಆಯಾ ಜಿಲ್ಲಾಧಿಕಾರಿಗಳ ಖಾತೆಗೆ ಅಗತ್ಯಕ್ಕೆ ತಕ್ಕಂತೆ ಹಣ ಬಿಡುಗಡೆ ಮಾಡಲಾಗುವುದು, ಸಂತ್ರಸ್ತರ ದಾಖಲೆ ಪರಿಶೀಲಿಸಿ ಕೂಡಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಇದರ ಜೊತೆಗೆ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿ ಕಾರ್ಯಕ್ಕೆ ರೂ.25 ಸಾವಿರ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರವಾಹದಿಂದ ಹಾಳಾಗಿರುವ ರಸ್ತೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆಗೆ ರೂ.500 ಬಿಡುಗಡೆ ಮಾಡಲಾಗುವುದು. ಕೆರೆಗಳು ಹಾಳಾಗಿದ್ದರೆ, ಅವುಗಳನ್ನು ಸಣ್ಣ ನೀರಾವರಿ ಇಲಾಖೆ ಮೂಲಕ ದುರಸ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com