ಬಿಎಂಟಿಸಿ ಬಸ್ಸುಗಳಲ್ಲಿ ಲೌಡ್ ಸ್ಪೀಕರ್ ಗಳಲ್ಲಿ ಹಾಡುಗಳನ್ನು ಹಾಕುವುದಕ್ಕೆ ನಿರ್ಬಂಧ!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ  ಪ್ರಯಾಣಿಕರು ತಮ್ಮ ಮೊಬೈಲ್ ಗಳ ಲೌಡ್ ಸ್ಪೀಕರ್ ಗಳಲ್ಲಿ ಹಾಡುಗಳನ್ನು ಹಾಕುವುದನ್ನು ತಕ್ಷಣದಿಂದಲೇ  ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ.
ಬಿಎಂಟಿಸಿ
ಬಿಎಂಟಿಸಿ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ  ಪ್ರಯಾಣಿಕರು ತಮ್ಮ ಮೊಬೈಲ್ ಗಳ ಲೌಡ್ ಸ್ಪೀಕರ್ ಗಳಲ್ಲಿ ಹಾಡುಗಳನ್ನು ಹಾಕುವುದನ್ನು ತಕ್ಷಣದಿಂದಲೇ  ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ.

ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಮೊಬೈಲ್ ಗಳ ಲೌಡ್ ಸ್ಪೀಕರ್ ಗಳಲ್ಲಿ ಹಾಡುಗಳನ್ನು ಹಾಕುವುದನ್ನು  ಕಡ್ಡಾಯವಾಗಿ ನಿರ್ಬಂಧಿಸಲು ಕ್ರಮ ಕೈಗೊಳ್ಳುವುದು, ಈ ಕುರಿತು ಕರ್ತವ್ಯ ನಿರತ ಚಾಲನಾ ಸಿಬ್ಬಂದಿಯು  ಪ್ರಯಾಣಿಕರಿಗೆ  ತಿಳುವಳಿಕೆಯನ್ನು ನೀಡಬೇಕು, ಸಾರ್ವಜನಿಕ ಸಂಪರ್ಕ ಅಧಿಕಾರಿಯೂ  ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಬಸ್ಸುಗಳಲ್ಲಿ  ಸ್ಟಿಕ್ಕರಿಂಗ್  ಮೂಲಕ ಮಾಹಿತಿಯನ್ನು ಪ್ರದರ್ಶಿಸಲು ಮುಖ್ಯ ತಾಂತ್ರಿಕ ಅಭಿಯಂತರರು ಹಾಗೂ ಕಾರ್ಯ ವ್ಯವಸ್ಥಾಪಕರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶಿಸಿದ್ದಾರೆ.
 
ಸಾರ್ವಜನಿಕ ಸಾರಿಗೆ ಸಂಸ್ಥೆಗಳಾದ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಮತ್ತು ಭಾರತೀಯ ರೈಲುಗಳಲ್ಲಿ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 94(1)(ವಿ)ಯನ್ನು ಉಲ್ಲಂಘಿಸಿ ಮೊಬೈಲ್ ಗಳಲ್ಲಿ  ಜೋರಾಗಿ ಹಾಡುಗಳನ್ನು ಹಾಕುವುದರಿಂದ ಶಬ್ದಮಾಲಿನ್ಯ ಉಂಟಾಗುತ್ತಿದ್ದು, ಇತರೆ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ .ಈ ಹಿನ್ನೆಲೆಯಲ್ಲಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್ ಗಳ ಲೌಡ್ ಸ್ಪೀಕರ್ ಗಳಲ್ಲಿ ಹಾಡುಗಳನ್ನು ಹಾಕುವುದನ್ನು ತಕ್ಷಣದಿಂದಲೇ  ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com