ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ಇನ್ಫೋಸಿಸ್ ಹೆಸರು: ಸರ್ಕಾರ ಆದೇಶ

ಮೆಟ್ರೋ 2ನೇ ಹಂತದಲ್ಲಿ ನಿರ್ಮಾಣಗೊಳ್ಳಲಿರುವ ಎಲೆಕ್ಟ್ರಾನಿಕ್ ಸಿಟಿ ಮಾರ್ಗದ ಕೋನಪ್ಪನ ಅಗ್ರಹಾರದ ಮೆಟ್ರೋ ನಿಲ್ದಾಣಕ್ಕೆ ಇನ್ಫೋಸಿಸ್ ಹೆಸರು ನೀಡಲು ಸರ್ಕಾರ ಶುಕ್ರವಾರ ಆದೇಶಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೆಟ್ರೋ 2ನೇ ಹಂತದಲ್ಲಿ ನಿರ್ಮಾಣಗೊಳ್ಳಲಿರುವ ಎಲೆಕ್ಟ್ರಾನಿಕ್ ಸಿಟಿ ಮಾರ್ಗದ ಕೋನಪ್ಪನ ಅಗ್ರಹಾರದ ಮೆಟ್ರೋ ನಿಲ್ದಾಣಕ್ಕೆ ಇನ್ಫೋಸಿಸ್ ಹೆಸರು ನೀಡಲು ಸರ್ಕಾರ ಶುಕ್ರವಾರ ಆದೇಶಿಸಿದೆ. 

ಕೋನಪ್ಪನ ಅಗ್ರಹಾರದ ಮೆಟ್ರೋ ನಿಲ್ದಾಣಕ್ಕೆ ಇನ್ಫೋಸಿಸ್ ಫೌಂಡೇಷನ್ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. 

ಮುಂದಿನ 30 ವರ್ಷಗಳ ಕಾಲ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದ ಹೆಸರು ಇನ್ಫೋಸಿಸ್ ಫೌಂಡೇಷನ್ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಎಂದು ಇರಲಿದೆ. ಹಾಗೆಯೇ ಈ ಅವಧಿಯಲ್ಲಿ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದ ನಿರ್ವಹಣೆ ಜವಾಬ್ದಾರಿಯನ್ನು ಇನ್ಫೋಸಿಸ್ ಫೌಂಡೇಷನ್ ನಿರ್ವಹಿಸಲಿದೆ. 

ಈ ಕುರಿತು ಬೆಂಗಳೂರು ಮೆಟ್ರೋ ರೈಲಿ ನಿಗಮ (ಬಿಎಂಆರ್'ಸಿಎಲ್) ಮತ್ತು ಇನ್ಫೋಸಿಸ್ ಫೌಂಡೇಷನ್ ಒಪ್ಪಂದ ಮಾಡಿಕೊಂಡಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಕ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಕಾಮಗಾರಿ ಕೈಗೊಳ್ಳಲು ಇನ್ಫೋಸಿಸ್ ಪ್ರತಿಷ್ಠಾನ ರೂ.200 ಕೋಟಿ ದೇಣಿಗೆ ನೀಡಿತ್ತು. 

2ನೇ ಹಂತದ ಮೆಟ್ರೋ ಯೋಜನೆಯಲ್ಲಿ ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದ ವರೆಗೂ 18.8ಕಿ.ಮೀ ಮೆಟ್ರೋ ಮಾರ್ಗ ನಿರ್ಮಾಣಗೊಳ್ಳಲಿದ್ದು, ಸುಮಾರು ರೂ.5744 ಕೋಟಿ ವೆಚ್ಚ ಅಂದಾಜಿಸಲಾಗಿದೆ. 18.88 ಕಿ.ಮೀ ಉದ್ದ 16 ನಿಲ್ದಾಣಗಳನ್ನು ಒಳಗೊಂಡ ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ 3 ಪ್ಯಾಕೇಜ್ ಗಳಡಿ ನಡೆಯುತ್ತಿದೆ. 

ಆರ್.ವಿರಸ್ತೆ-ಹೆಚ್ಎಸ್ಆರ್ ಲೈಔಟ್ (6.34 ಕಿಮೀ, ಹೆಚ್ಎಸ್ಆರ್ ಲೇಔಟ್-ಹೊಸರಸ್ತೆ (6.4 ಕಿಮೀ), ಹೊಸ ರಸ್ತೆ-ಬೊಮ್ಮಸಂದ್ರ (6.41 ಕಿ.ಮೀ) ಕಾಮಗಾರಿ ನಡೆಯುತ್ತಿದ್ದು, 2021ಕ್ಕೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷಶೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com