ಡಿನೋಟಿಫಿಕೇಷನ್ ಪ್ರಕರಣ; ಸಮನ್ಸ್ ಪ್ರಶ್ನಿಸಿ ಹೆಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೊರೆ

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು.

2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಕಾನೂನುಬಾಹಿರವಾಗಿ ಹಲಗೇವಡೇರಹಳ್ಳಿಯ 2,24 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಆಕ್ಷೇಪಿಸಿ ಎಂ.ಮಹದೇವ ಸ್ವಾಮಿ ಎಂಬುವರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಖಾಸಗಿ ದೂರಿನ ಸಂಬಂಧ ಪೊಲೀಸರು 'ಬಿ ವರದಿ' ಸಲ್ಲಿಸಿದ್ದರು. ಇದನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com