ರಾಜಕೀಯದಲ್ಲಿ ಬೆಳೆಯಲು ಡಿಕೆ.ಶಿವಕುಮಾರ್ ಸಹಾಯ ಮಾಡಿದ್ದರು: ಇಡಿಗೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಮಧ್ಯಾಹ್ನ 12ರಿಂದ ಸಂಜೆ 7.30ರವರೆಗೆ ವಿಚಾರಣೆ ನಡೆಸಿತು.
Published: 21st September 2019 08:27 AM | Last Updated: 21st September 2019 08:55 AM | A+A A-

ಲಕ್ಷ್ಮೀ ಹೆಬ್ಬಾಳ್ಕರ್
ನವದೆಹಲಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಮಧ್ಯಾಹ್ನ 12ರಿಂದ ಸಂಜೆ 7.30ರವರೆಗೆ ವಿಚಾರಣೆ ನಡೆಸಿತು.
ಶುಕ್ರವಾರ ಸುಮಾರು 7.30 ಗಂಟೆ ವಿಚಾರಣೆ ನಡೆದ ಬಳಿಕ ಪ್ರಧಾನ ಕಚೇರಿಯಿಂದ ಹೊರ ಬಂದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಧಿಕಾರಿಗಳು ಕೇಳಿದ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ, ಇದೇ ವೇಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿಲ್ಲ ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ತಿಳಿದುಬಂದುದೆ.
ಇಡಿ ಕೇಳಿರುವ ಎಲ್ಲಾ ದಾಖಲೆಗಳನ್ನೂ ನೀಡಿದ್ದೇನೆ. ಸಮರ್ಪಕ ಉತ್ತರ ನೀಡಿದ್ದೇನೆ. ಡಿ.ಕೆ.ಶಿವಕುಮಾರ್ ಅವರ ಜೊತೆಗೆ ನಾನು ಯಾವುದೇ ವ್ಯಾವಹಾರಿಕೆ ಸಂಬಂಧ ಹೊಂದಿಲ್ಲ. ಅವರು ನನ್ನ ರಾಜಕೀಯ ಗುರು. ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ವ್ಯಾವಹಾರಿಕ ಸಂಬಂಧ ಹೊಂದಿಲ್ಲವೆಂದಾದರೆ ಇಡಿ ನಿಮ್ಮನ್ನು ಯಾರೆ ವಿಚಾರಣೆಗೆ ಕರೆದು ಎಂಬ ಪತ್ರಕರ್ತರ ಪ್ರಶ್ನೆಗೆ ಕೇವಲ ಧ್ಯಾಂಕ್ಸ್ ಎಂದು ಹೇಳಿ ಸ್ಥಳದಿಂದ ಹೊರಟು ಹೊರಟರು.