ಪ್ರವಾಹಕ್ಕೆ ನಷ್ಟವಾಗಿದ್ದು 10 ಸಾವಿರ ಕೋಟಿ, ಸರ್ಕಾರದಿಂದ ಬಿಡುಗಡೆಯಾಗಿದ್ದು ಕೇವಲ 167 ಕೋಟಿ ರೂ!

ಉತ್ತರ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಈ ವರ್ಷದ ಮಳೆಗೆ ಪ್ರವಾಹ ಉಂಟಾಗಿ ಬೆಳಗಾವಿ ಜಿಲ್ಲೆಯಲ್ಲಿ ಅಂದಾಜು 10 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ರಾಜ್ಯ ಸರ್ಕಾರ ಇಲ್ಲಿಯವರೆಗೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ 167 ಕೋಟಿ ರೂಪಾಯಿ ಮಾತ್ರ.  
ಪ್ರವಾಹದ ನಂತರ ಕಂಡುಬಂದ ದೃಶ್ಯ
ಪ್ರವಾಹದ ನಂತರ ಕಂಡುಬಂದ ದೃಶ್ಯ

ಬೆಳಗಾವಿ: ಉತ್ತರ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಈ ವರ್ಷದ ಮಳೆಗೆ ಪ್ರವಾಹ ಉಂಟಾಗಿ ಬೆಳಗಾವಿ ಜಿಲ್ಲೆಯಲ್ಲಿ ಅಂದಾಜು 10 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ರಾಜ್ಯ ಸರ್ಕಾರ ಇಲ್ಲಿಯವರೆಗೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ 167 ಕೋಟಿ ರೂಪಾಯಿ ಮಾತ್ರ. 


ಕಂದಾಯ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಿನ್ನೆ ಜಿಲ್ಲೆಯ ಪ್ರವಾಹ ಸಂತ್ರಸ್ತರು ಮತ್ತು ಅವರಿಗೆ ನೀಡಲಾದ ಪರಿಹಾರಗಳ ಕುರಿತು ವಿವರ ಪಡೆಯಲು ಸಭೆ ಕರೆದಿದ್ದರು. 


ಜಿಲ್ಲೆಯಲ್ಲಿ ಪ್ರವಾಹ ಕ್ಕೆ 2.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿ ಹೋಗಿದೆ. ಈ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಬೆಳೆಗಳಿಗಾಗಿ ಬಳಸಲಾದ ಕೃಷಿ ಭೂಮಿ 6.66 ಲಕ್ಷ ಹೆಕ್ಟೇರ್ ಗಳು. ಮಹಾರಾಷ್ಟ್ರದ ಹಲವು ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದರಿಂದಾಗಿ ಆಗಸ್ಟ್ ತಿಂಗಳಲ್ಲಿ 377 ಗ್ರಾಮಗಳು ನಾಶವಾಗಿ ಹೋಗಿವೆ.ಅಲ್ಲದೆ ಆಗಸ್ಟ್ ತಿಂಗಳಲ್ಲಿ ಮಹಾರಾಷ್ಟ್ರದಿಂದ 5.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. 4.15 ಲಕ್ಷ ಜನರನ್ನು ಪ್ರವಾಹಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಳಿಸಲಾಗಿದ್ದು 493 ಗಂಜಿ ಮತ್ತು ನಿರಾಶ್ರಿತ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ.


ಇತ್ತೀಚಿನ ನೆರೆ ಪ್ರವಾಹಗಳಿಂದ ಮೃತಪಟ್ಟ 25ರಿಂದ 28 ಮಂದಿಯ ಕುಟುಂಬಗಳಿಗೆ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಬೆಳಗಾವಿ ಜಿಲ್ಲೆಯ ಪ್ರವಾಹದಿಂದ ತೊಂದರೆಗೀಡಾಗಿದ್ದ 1.12 ಲಕ್ಷ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ತಕ್ಷಣ ಪರಿಹಾರ ನೀಡಲಾಗಿದೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ವಿವರಣೆ ನೀಡಿದರು.


ಸಮೀಕ್ಷೆ ಮುಗಿದ ನಂತರ ಜಿಲ್ಲೆಯಲ್ಲಿ ಪ್ರವಾಹಕ್ಕೆ 69 ಸಾವಿರದ 183 ಮನೆಗಳು ಹಾನಿಗೀಡಾಗಿದ್ದು ಈ ಬಗ್ಗೆ ರಾಜೀವ್ ಗಾಂಧಿ ವಸತಿ ನಿಗಮ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಇನ್ನೊಂದು ವಾರದಲ್ಲಿ ಮನೆಯಿಂದ ಹಾನಿಗೀಡಾದ ಜನರಿಗೆ ಪರಿಹಾರ ಕಲ್ಪಿಸುವ ಕೆಲಸ ಕೈಗೆತ್ತಿಕೊಳ್ಳಲಾಗುವುದು. 


ಈ ಮಧ್ಯೆ ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡುವಂತೆ ಹಲವು ರೈತಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಚಿಕ್ಕೋಡಿಯಲ್ಲಿ ರೈತ ಸಂಘಟನೆ ಪ್ರತಿಭಟನೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com