ಮೇಯರ್ ಚುನಾವಣೆ: ಚುನಾವಣಾ ಆಯೋಗದ ಅಭಿಪ್ರಾಯ ಕೇಳಿದ ಬಿಬಿಎಂಪಿ
ಈಗಾಗಲೇ ಸೆ.27ಕ್ಕೆ ನಿಗದಿಯಾಗಿರುವ ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮುಂದೂಡುವ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಂದ ಸೂಕ್ತ ನಿರ್ದೇಶನ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಬಿ.ಹೆಚ್.ಅನುಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
Published: 22nd September 2019 08:16 AM | Last Updated: 22nd September 2019 08:27 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಈಗಾಗಲೇ ಸೆ.27ಕ್ಕೆ ನಿಗದಿಯಾಗಿರುವ ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮುಂದೂಡುವ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಂದ ಸೂಕ್ತ ನಿರ್ದೇಶನ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಬಿ.ಹೆಚ್.ಅನುಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವುದರಿಂದ ಸೆ.27ಕ್ಕೆ ನಡೆಯಲಿರುವ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಗರ ಮತದಾರರ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ರಾಜ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು ಅವರಿಂದ ಸೂಕ್ತ ನಿರ್ದೇಶನ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಲಿಕೆ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಬಿಬಿಎಂಪಿ ಮೇಯರ್ ಚುನಾವಣೆಗೂ ಯಾವುದೇ ಸಂಬಂಧವೇ ಇಲ್ಲ. ಮೇಯರ್ ಚುನಾವಣೆ ನಡೆದರೆ ಉಪ ಚುನಾವಣೆ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಪ್ರಶ್ನೆ ಮಾಡಿರುವ ಅವರು, ಆಡಳಿತ ಪಕ್ಷದ ನಾಯಕರ ವಾದದಲ್ಲಿ ಅರ್ಥವಿಲ್ಲ ಎಂದಿದ್ದಾರೆ.