ದಸರಾ ಉತ್ಸವ ಹಿನ್ನೆಲೆ: ನೀತಿ ಸಂಹಿತೆ ವಿನಾಯ್ತಿಗೆ ಮೈಸೂರು ಜಿಲ್ಲಾಧಿಕಾರಿ ಮನವಿ  

ದಸರಾ ಉತ್ಸವದ  ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಮೈಸೂರು ಜಿಲ್ಲೆಯ ಇತರೆಡೆ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

Published: 22nd September 2019 03:53 PM  |   Last Updated: 22nd September 2019 03:53 PM   |  A+A-


MysuruDC

ಮೈಸೂರು ಜಿಲ್ಲಾಧಿಕಾರಿ

Posted By : Nagaraja AB
Source : UNI

ಮೈಸೂರು: ದಸರಾ ಉತ್ಸವದ  ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಮೈಸೂರು ಜಿಲ್ಲೆಯ ಇತರೆಡೆ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಅನರ್ಹ ಶಾಸಕರಿಂದ ತೆರವಾಗಿರುವ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪ ಚುನಾವಣೆ ಘೋಷಣೆಯಾಗಿದ್ದು, ಆಯಾ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಪೂರ್ಣ ಜಿಲ್ಲೆಗೆ ನೀತಿ ಸಂಹಿತೆ ಅನ್ವಯವಾಗಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಮಹತ್ವವುಳ್ಳ ದಸರಾ ಹಬ್ಬದ ಹಿನ್ನೆಲೆಯಲ್ಲಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್  ಜಿ. ಶಂಕರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು,ಪ್ರಸ್ತುತ ಯಾವುದೇ ಸಚಿವರು ಇಲ್ಲವೇ ಜನಪ್ರತಿನಿಧಿಗಳು ಅಧಿಕೃತ ಸಭೆಗಳನ್ನು ನಡೆಸಲು ಅವಕಾಶವಿಲ್ಲ.ಅವರು ಜಿಲ್ಲೆಯಲ್ಲಿ ಕಚೇರಿಯ ವಾಹನಗಳನ್ನು ಕೂಡಾ ಬಳಸುವಂತಿಲ್ಲ.ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.ಆದರೆ,ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp