ಎಲ್ಲರೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆ: ಹೆಚ್.ಡಿ.ದೇವೇಗೌಡ
ಪಕ್ಷದಲ್ಲಿರುವ ಪ್ರತೀಯೊಬ್ಬ ಕಾರ್ಯಕರ್ತನೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.
Published: 22nd September 2019 10:36 AM | Last Updated: 22nd September 2019 10:36 AM | A+A A-

ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ
ಬೆಂಗಳೂರು: ಪಕ್ಷದಲ್ಲಿರುವ ಪ್ರತೀಯೊಬ್ಬ ಕಾರ್ಯಕರ್ತನೂ ಕಾಂಗ್ರೆಸ್ ಸಹವಾಸ ಬೇಡ ಎನ್ನುತ್ತಿದ್ದಾರೆಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಜೊತೆ ಕೈಜೋಡಿಸಿ ಸಾಕಷ್ಟು ಅನುಭವಿಸಿರುವ ಕುಮಾರಸ್ವಾಮಿಯವರಿಗೆ, ಅದರ ಜೊತೆ ಮೈತ್ರಿ ಮುಂದುವರೆಸುವ ಇಷ್ಟವಿಲ್ಲ. 15 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ನಡೆಸಬೇಕೆಂದು ಇಚ್ಛಿಸುತ್ತಿದ್ದಾರೆಂದು ಹೇಳಿದ್ದಾರೆ.
30 ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಕಳೆದ 14 ತಿಂಗಳಿಂದ ಅವರು ಅನುಭವಿಸಿರುವ ಯಾತನೆ ಹೇಳಲು ಅಸಾಧ್ಯವಾಗಿದೆ. ಕಾಂಗ್ರೆಸ್ ಅಥವಾ ಬಿಜೆಪಿ ಜೊತೆಗೆ ಕೈಜೋಡಿಸುವುದು ಅವರಿಗೆ ಇಷ್ಟವಿಲ್ಲ. ಮೈತ್ರಿ ಕುರಿತಂತೆ ಭಾನುವಾರ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.