ಹಿರಿಯ ಪತ್ರಕರ್ತ ರವೀಶ್ ಕುಮಾರ್"ಗೆ ಚೊಚ್ಚಲ 'ಗೌರಿ ಲಂಕೇಶ್ ಪ್ರಶಸ್ತಿ'

ಮ್ಯಾಗ್ಗೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ಚೊಚ್ಚಲ ಗೌರಿ ಲಂಕೇಶ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
ರವೀಶ್ ಕುಮಾರ್
ರವೀಶ್ ಕುಮಾರ್

ಬೆಂಗಳೂರು: ಮ್ಯಾಗ್ಗೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ಚೊಚ್ಚಲ ಗೌರಿ ಲಂಕೇಶ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 

ನಗರದ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ಗೌರಿ ಸ್ಮಾರ ಟ್ರಸ್ಟ್ ವತಿಯಿಂದ ಗೌರಿ ಲಂಕೇಶ್ ರಾಷ್ಟ್ರೀಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ, ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠೆಯನ್ನು ತೋರುತ್ತಾ ಬಂದಿದ್ದಾರೆ. 

ಕಾರ್ಯಕ್ರಮದಲ್ಲಿ ಮೂರು ಪುಸ್ತಕಗಳನ್ನೂ ಬಿಡುಗಡೆಗೊಳಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿರುವ ರವೀಶ್ ಅವರು, ಭಾರತೀಯ ಮಾಧ್ಯಮಗಳು ದೇಶದ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದೆ. ಜನರು ನೋಡುವುದಿಲ್ಲ ಎಂದಲ್ಲ ಆದರೆ, ಮಾಧ್ಯಮಗಳು ಸಚಿವರನ್ನು ಅವತಾರ ಪುರುಷರಂತೆ ಬಿಂಬಿಸುತ್ತಿವೆ ಎಂದು ಹೇಳಿದ್ದಾರೆ. 

ಇದೇ ವೇಳೆ ಒಂದು ರಾಷ್ಟ್ರ, ಒಂದು ಭಾಷೆ ಆಲೋಚನೆ ಬಗ್ಗೆ ಮಾತನಾಡಿದ ಅವರು, ಎಲ್ಲಾ ಭಾಷೆಗಳನ್ನೂ ಗಣನೆಗೆ ತೆಗೆದುಕೊಂಡರೆ, ಒಂದು ಅರ್ಥದಲ್ಲಿ ನಾವೆಲ್ಲರೂ ಒಂದು ರಾಷ್ಟ್ರದಲ್ಲಿದ್ದೇವೆಂದು ಎನಿಸುತ್ತದೆ. ಹಿಂದಿ ಹೇರಿಕೆಗೆ ಯಾರೂ ಭಯಪಡಬೇಕಿಲ್ಲ. ಏಕೆಂದರೆ, ಹಿಂದಿ ಹೇರಿಕೆ ಮಾಡಲು ಮುಂದಾಗಿರುವವರೇ, ಆ ಭಾಷೆಯನ್ನು ಅದರ ನಿಜವಾದ ಸದ್ಗುಣದಲ್ಲಿ ಅಭ್ಯಾಸ ಮಾಡಲು ಸ್ವತಃ ವಿಫಲರಾಗಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com