ಬೆಳಗಾವಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ!

ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿಯು ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಗಾವಿಯ ಗೋಕಾಕ್ ನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿಯು ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಗಾವಿಯ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ನಗರದ ಮೋಮಿನ ಗಲ್ಲಿಯಲ್ಲಿ ನಡೆದ ದುರಂತದಲ್ಲಿ ತಾಯಿ ಲಕ್ಷ್ಮೀ ಯಮಕನಮರಡಿ (40) ಮಗಳು ಹರ್ಷಿತಾ (8) ಹಾಗೂ ಮಗ ಸಮರ್ಥ (6)  ಮೃತಪಟ್ಟಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿ ಹಾಗೂ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು ಘಟನೆಗೆ ಕಾರಣ ಪತ್ತೆಯಾಗಿಲ್ಲ.

ಗೋಕಾಕ್ ನಗರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದು ತನಿಖೆ ಮುಂದುವರಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com