ಚಿಕ್ಕಬಳ್ಳಾಪುರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.15 ಲಕ್ಷ ರೂ.ವಶ

ಉಪ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.15 ಲಕ್ಷ ರೂಪಾಯಿ ನಗದನ್ನು ಚುನಾವಣಾ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

Published: 24th September 2019 12:07 PM  |   Last Updated: 24th September 2019 12:07 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : UNI

ಚಿಕ್ಕಬಳ್ಳಾಪುರ:  ಉಪ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.15 ಲಕ್ಷ ರೂಪಾಯಿ ನಗದನ್ನು ಚುನಾವಣಾ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ನಗರದ ಹೊರ ವಲಯದ ಕಣಿವೆ ನಾರಾಯಣಪುರ ಸಮೀಪದ ಸುಲ್ತಾನ್‌ಪೇಟೆಯಲ್ಲಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ವೇಳೆ ಈ ನಗದು ವಶಪಡಿಸಲಾಗಿದೆ. ದಾಖಲೆ ಇಲ್ಲದೇ ಬೆಂಗಳೂರಿನ ಯಲಹಂಕ ನಿವಾಸಿ ನದೀಮ್ ಎಂಬುವರು ಕಾರಿನಲ್ಲಿ ಇಟ್ಟಿದ್ದ 2.15 ಲಕ್ಷ ರೂಗಳನ್ನು ಚುನಾವಣಾ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಈ ಬಗ್ಗೆ ನಂದಿ ಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆ ಪಿಎಸ್ಐ ಪಾಟೀಲ್ ತಿಳಿಸಿದ್ದಾರೆ.

ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಚುನಾವಣಾ ಅಕ್ರಮಗಳನ್ನು ತಡೆಯಲು ಜಿಲ್ಲಾಡಳಿತ 10 ಚೆಕ್ ಪೋಸ್ಟ್ ಗಳನ್ನು ತೆರೆದಿದೆ.
 

Stay up to date on all the latest ರಾಜ್ಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp