ಚಾಮರಾಜನಗರ: ‘ಆಸ್ಪತ್ರೆ ವಾಸ್ತವ್ಯ' ಕ್ಕೆ ಸಚಿವ ಶ್ರೀರಾಮುಲು ಚಾಲನೆ

ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಇದೇ ಮೊದಲ ಬಾರಿಗೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ತಮ್ಮ ‘ಆಸ್ಪತ್ರೆ ವಾಸ್ತವ್ಯ’ಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು. 

Published: 25th September 2019 03:41 PM  |   Last Updated: 25th September 2019 03:41 PM   |  A+A-


B. Sriramulu Stayed in District Hospital

ಆಸ್ಪತ್ರೆಯಲ್ಲಿ ಶ್ರೀರಾಮುಲು

Posted By : shilpa
Source : Online Desk

ಚಾಮರಾಜನಗರ: ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಇದೇ ಮೊದಲ ಬಾರಿಗೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ತಮ್ಮ ‘ಆಸ್ಪತ್ರೆ ವಾಸ್ತವ್ಯ’ಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ನಡೆಸಿ ಅಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡುವ ಮೂಲಕ ಅಲ್ಲಿಗೆ ಭೇಟಿ ನೀಡುವ ಜನರ ಸಮಸ್ಯೆಗಳು ಮತ್ತು ಆರೋಗ್ಯ ಸೇವೆಯ ಕುರಿತು ಮಾಹಿತಿ ಕಲೆ ಹಾಕುವುದಾಗಿ ತಿಳಿಸಿದರು. ಅವರು ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲೇ ತಂಗಿದ್ದರು. 

ರೋಗಿಗಳ ಸಮಸ್ಯೆಗಳನ್ನು ಹತ್ತಿರದಿಂದ ತಿಳಿಯಲು ಶ್ರೀರಾಮುಲು ಆಸ್ಪತ್ರೆಯಲ್ಲಿ ತಂಗಿದ್ದರು. ಬೆಳಗ್ಗೆ ಎದ್ದು ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿ, ತಾವು ಉಳಿದಿದ್ದ ಕೊಠಡಿಯಲ್ಲೇ ಸಚಿವರು ಶಿವಪೂಜೆ ಮಾಡಿದರು.

ವಸತಿ ಗೃಹ, ಪ್ರವಾಸಿ ಬಂಗ್ಲೆಗಳು ಇಲ್ಲವೇ ಐಷಾರಾಮಿ ಹೋಟೆಲ್ ಗಳಲ್ಲಿ ವಾಸ್ತವ್ಯ ಹೂಡುವ ಬದಲು ಆಸ್ಪತ್ರೆಯಲ್ಲಿ ನೆಲೆಸುತ್ತೇನೆ. ಇದರಿಂದ ರೋಗಿಗಳು, ಅವರ ಸಂಬಂಧಿಕರು ಹಾಗೂ ಆಸ್ಪತ್ರೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯುತ್ತದೆ ಎಂದರು. ಇದಕ್ಕೂ ಮುನ್ನ ಅವರು ರೋಗಿಗಳೊಂದಿಗೆ ಮಾತುಕತೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp