'ತಾಕತ್ ಇದ್ರೆ ಹಿಡೀರೋ' ಎಂದಿದ್ದ ಚಾಲಕ ಕೊನೆಗೂ ಪೊಲೀಸರ ಅತಿಥಿ!

ಬೆಂಗಳೂರಿನ ಟೌನ್ ಹಾಲ್ ಬಳಿ ಟ್ರಾಫಿಕ್ ಪೇದೆಯೋರ್ವ ಚಾಲಕನನ್ನು ಥಳಿಸಿರುವ ವಿಡಿಯೋ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರಿಗೆ ಸವಾಲು ಹಾಕಿದ್ದ ಚಾಲಕ ರವಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಾಲಕ ರವಿ
ಬಂಧಿತ ಚಾಲಕ ರವಿ

ಮೈಸೂರು: ಬೆಂಗಳೂರಿನ ಟೌನ್ ಹಾಲ್ ಬಳಿ ಟ್ರಾಫಿಕ್ ಪೇದೆಯೋರ್ವ ಚಾಲಕನನ್ನು ಥಳಿಸಿರುವ ವಿಡಿಯೋ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರಿಗೆ ಸವಾಲು ಹಾಕಿದ್ದ ಚಾಲಕ ರವಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಹೌದು.. ಈ ಹಿಂದೆ ತನ್ನ ಕಾರಿನಲ್ಲಿ ಕೂತು ಸೆಲ್ಫಿ ವೀಡಿಯೋ ಮಾಡಿ, ತಾನು ದಾಖಲೆ ಇಲ್ಲದೇ ವಾಹನ ಓಡಿಸುತ್ತಿದ್ದೇನೆ. ತಾಕತ್ ಇದ್ದರೆ ನನ್ನನ್ನು ಹಿಡಿಯಿರಿ ಎಂದು ರವಿ ಪೊಲೀಸರಿಗೆ ಸವಾಲ್ ಹಾಕಿದ್ದನು. ಅಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದನು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ಈ ವಿಡಿಯೋ ಜಾಡು ಹಿಡಿದು ತನಿಖೆ ನಡೆಸಿದ್ದ ಮೈಸೂರು ಪೊಲೀಸರು ಕೊನೆಗೂ ಪೊಲೀಸರಿಗೆ ಸವಾಲು ಹಾಕಿದ್ದ ಚಾಲಕ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಡಿಯೋ ನೋಡಿದ್ದ ಪೊಲೀಸರು ರವಿಯ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಾಚೆಬಾಯನಹಳ್ಳಿ ಗ್ರಾಮದ ನಿವಾಸಿಯಾಗಿರುವ ರವಿಯನ್ನು ಆತನ ಸ್ವಗ್ರಾಮದಲ್ಲೇ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕಳೆದ ಎರಡು ದಿನಗಳ ಹಿಂದೆ ಪೊಲೀಸರಿಗೆ ಚಾಲೆಂಜ್ ಮಾಡಿದ್ದ ರವಿ ಈಗ ಜೈಲು ಕಂಬಿ ಎಣಿಸುವಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com