ಯೋಗೇಶ್ ಗೌಡ ಕೊಲೆ ಕೇಸ್: ಸಿಬಿಐನಿಂದ ಎಫ್​ಐಆರ್​ ದಾಖಲು

ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ  ಸಿಬಿಐ ಆರು ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದೆ. 
ಯೋಗೇಶ್ ಗೌಡ ಕೊಲೆ ಕೇಸ್: ಸಿಬಿಐನಿಂದ ಎಫ್​ಐಆರ್​ ದಾಖಲು
ಯೋಗೇಶ್ ಗೌಡ ಕೊಲೆ ಕೇಸ್: ಸಿಬಿಐನಿಂದ ಎಫ್​ಐಆರ್​ ದಾಖಲು

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ  ಸಿಬಿಐ ಆರು ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದೆ.

ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ, ಮಹಾಬಲೇಶ್ವರ ಹೊನಗಲ್  ಅವರುಗಳ ವಿರುದ್ಧ ತನಿಖಾ ಸಂಸ್ಥೆ ಪ್ರಕರಣ ದಾಖಲಿಸಿಕೊಂಡಿದೆ.

ಕೊಲೆ ಪ್ರಕರಣ ತನಿಖೆಯನ್ನು ಕೇಂದ್ರೀಯ ತನಿಖಾ ದಳ ವಹಿಸಿಕೊಂಡ ಬಳಿಕ ಇದು ಮೊದಲ ಬಾರಿಗೆ ಆರು ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ.

ಘಟನೆ ವಿವರ

ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ವರನ್ನು  2016ರ ಜೂನ್ 15 ರಂದು ಸಪ್ತಾಪುರದ ಉದಯ್ ಜಿಮ್  ಬಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಮಾರಕಾಸ್ತ್ರ ಬಳಸಿ ದಾಳಿ ನಡೆಸಿದ ದುಷ್ಕರ್ಮಿಗಳು ಜಿಮ್ ನಲ್ಲಿ ಪೇಪರ್ ಓದುತ್ತಿದ್ದಾಲಗೇ ಕೃತ್ಯ ಎಸಗಿದ್ದರು.

ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರೂ ಇದ್ದು ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ಮೃತ ಯೋಗೇಶ್ ಸೋದರ ಹೈಕೋರ್ಟ್ ಗೆ ಅರ್ಜಿ ಹಾಕಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com