ಕೈದಿಗಳ ಅಸಹಜ ಸಾವು; ಪರಿಹಾರ ನಿಗದಿಗೆ ನಿವೃತ್ತ ನ್ಯಾಯಾಧೀಶರ ನೇಮಕಕ್ಕೆ ಹೈಕೋರ್ಟ್ ಆದೇಶ

ರಾಜ್ಯದ ಕಾರಾಗೃಹಗಳಲ್ಲಿ‌ ಅಸಹಜವಾಗಿ ಸಾವನ್ನಪ್ಪಿದ ಕೈದಿಗಳ ಕುಟುಂಬದವರಿಗೆ ನೀಡುವ ಪರಿಹಾರ ಧನವನ್ನು ನಿರ್ಧರಿಸಲು ನಿವೃತ್ತ ನ್ಯಾಯಾಧೀಶರನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ‌ ಅಸಹಜವಾಗಿ ಸಾವನ್ನಪ್ಪಿದ ಕೈದಿಗಳ ಕುಟುಂಬದವರಿಗೆ ನೀಡುವ ಪರಿಹಾರ ಧನವನ್ನು ನಿರ್ಧರಿಸಲು ನಿವೃತ್ತ ನ್ಯಾಯಾಧೀಶರನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
  
ಜೈಲುಗಳಲ್ಲಿ ಕೈದಿಗಳ ಅಸಹಜ ಸಾವಿಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ  ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ ಗುರುವಾರ ಈ ಆದೇಶ ನೀಡಿದೆ. 
  
 2012 ರಿಂದ 2019ರ ಮೇ ವರೆಗೆ ಕಾರಾಗೃಹಗಳಲ್ಲಿ ಸಾವನ್ನಪ್ಪಿರುವ ಕೈದಿಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯ ಕಲಂ 163 (ಎ‌) ಅಡಿಯಲ್ಲಿ 2019ರ ನವೆಂಬರ್ 1ರೊಳಗೆ ಪರಿಹಾರ ನಿಗದಿಪಡಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com