ರೆಬೆಲ್ಸ್'ಗೆ 'ಸುಪ್ರೀಂ' ರಿಲೀಫ್: ಐತಿಹಾಸಿಕ ಆದೇಶ ಎಂದ ಸಿಎಂ ಯಡಿಯೂರಪ್ಪ

ಶಾಸಕರ ಅನರ್ಹತೆ ಪ್ರಕರಣ ಇತ್ಯರ್ಥವಾಗುವವರೆಗೆ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಇದೊಂದು ಐತಿಹಾಸಿಕ ಆದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಶಾಸಕರ ಅನರ್ಹತೆ ಪ್ರಕರಣ ಇತ್ಯರ್ಥವಾಗುವವರೆಗೆ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಇದೊಂದು ಐತಿಹಾಸಿಕ ಆದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ. 

ತೀರ್ಪು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ನ್ಯಾಯಾಲಯದ ಆದೇಶ ಐತಿಹಾಸಿಕ ಆದೇಶವಾಗಿದೆ. ಆತಂಕದಲ್ಲಿದ್ದ ಶಾಸಕರಿಗೆ ಆದೇಶದಿಂದ ನಿರಾಳವಾಗಿದೆ. ನ್ಯಾಯಾಲಯ ಆದೇಶವನ್ನು ಸ್ವಾಗತಿಸುತ್ತೇವೆ. ಪ್ರತಿಪಕ್ಷಗಳು ಸುಪ್ರೀಂಕೋರ್ಟ್ ಮೇಲೆಯೇ ಅನುಮಾನ ವ್ಯಕ್ತಪಡಿಸುತ್ತಿರುವುದು ಆಶ್ಚರ್ಯ ಉಂಟು ಮಾಡಿದೆ ಎಂದು ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಪ್ರಭಾವದಿಂದ ಉಪಚುನಾವಣೆ ಮುಂದಕ್ಕೆ ಹೋಗಿದೆ ಎಂಬ ಚುನಾವಣಾ ಆಯೋಗದ ಕುರಿತ ಹೇಳಿಕೆಯನ್ನು ಮಾಜಿ ಪ್ರಧಾನಿ ದೇವೇಗೌಡರಿಂದ ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ. 

ಸುಪ್ರೀಂ ಆದೇಶ ಅನರ್ಹ ಶಾಸಕರಿಗೆ ಸೋಲು: ದಿನೇಶ್ ಗುಂಡೂರಾವ್
ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಇದು ಅನರ್ಹ ಶಾಸಕರಿಗೆ ಮತ್ತೊಂದು ಸೋಲೇ ಹೊರತು ರಿಲೀಫ್ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. 

ಪ್ರಕರಣ ಇತ್ಯರ್ಥವಾಗುವವರೆಗೂ ಉಪ ಚುನಾವಣೆಗೆ ತಡೆ ನೀಡಿದ್ದು ಸಾಗತಾರ್ಹ. ಅ.22ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ. ಅಲ್ಲಿಯವರೆಗೂ ಕಾದು ನೋಡೋಣ. ಸ್ಪೀಕರ್ ಆದೇಶವನ್ನು ಸರ್ವೋಚ್ಛ ನ್ಯಾಯಲಯ ಗಂಭೀರವಾಗಿ ಪರಿಗಣಿಸುವುದು ಅನಿವಾರ್ಯವಾಗಲಿದೆ. ಇದರಿಂದ ಹೊರಬರುವ ತೀರ್ಪು ಇಡೀ ದೇಶಕ್ಕೇ ಮಾದರಿಯಾಬಹುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com