ದಕ್ಷಿಣ ಕನ್ನಡ ಜಿಲ್ಲೆಯ 5 ಗ್ರಾಮ ಪಂಚಾಯತ್‌ಗಳು 'ಗಾಂಧಿ ಗ್ರಾಮ ಪುರಸ್ಕಾರ'ಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಐದು ಗ್ರಾಮ ಪಂಚಾಯತ್ ಗಳು 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಮಹಾತ್ಮ ಗಾಂಧಿ
ಮಹಾತ್ಮ ಗಾಂಧಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಐದು ಗ್ರಾಮ ಪಂಚಾಯತ್ ಗಳು 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು, ಸುಳ್ಯದ ಕಲ್ಮಡ್ಕ , ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು , ಪುತ್ತೂರು ತಾಲೂಕಿನ ಕುಟ್ರುಪಾಡಿ ಮತ್ತು ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಸೇರಿ ಯದು ಗ್ರಾಮ ಪಂಚಾಯತ್‌ಗಳು 'ಗಾಂಧಿ ಗ್ರಾಮ ಪುರಸ್ಕಾರ' ಕ್ಕೆ ಆಯ್ಕೆಯಾಗಿವೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜಯಂತಿಅಕ್ಟೊಬರ್ 2 ರಂದು ಬೆಂಗಳೂರಿನಲ್ಲಿ ಜರಗುವ ಕಾರ್ಯಕ್ರಮದಲ್ಲಿ ಈ ಗ್ರಾಮ ಪಂಚಾಯತ್ ಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಪುರಸ್ಕಾರ ಪಡೆಯಲಿರುವ ಗ್ರಾಮ ಪಂಚಾಯತ್ ಗಳು ತಮ್ಮ ಕಾರ್ಯಕ್ಷಮತೆ ಮತ್ತು ಆವಿಷ್ಕಾರ ಗಳಿಗೆ ಪ್ರೋತ್ಸಾಹ ರೂಪದಲ್ಲಿ ತಲಾ ರೂಪಾಯಿ 5 ಲಕ್ಷ ನಗದು ಪುರಸ್ಕಾರ ಪಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com