ಬೆಂಗಳೂರು: ಎಟಿಎಂಗೆ ತುಂಬಿಸಬೇಕಾಗಿದ್ದ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ 

ಕಮ್ಮನಹಳ್ಳಿ ಮುಖ್ಯರಸ್ತೆಯ ಐಸಿಐಸಿಐ ಬ್ಯಾಂಕ್‌ನ ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ಹಣ ತಂದಿದ್ದ ಕಸ್ಟೋಡಿಯನ್ ವಾಹನದೊಂದಿಗೆ ಪರಾರಿಯಾಗಿದ್ದ ಚಾಲಕ ಪವನ್‌ ಎಂಬಾತನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಮ್ಮನಹಳ್ಳಿ ಮುಖ್ಯರಸ್ತೆಯ ಐಸಿಐಸಿಐ ಬ್ಯಾಂಕ್‌ನ ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ಹಣ ತಂದಿದ್ದ ಕಸ್ಟೋಡಿಯನ್ ವಾಹನದೊಂದಿಗೆ ಪರಾರಿಯಾಗಿದ್ದ ಚಾಲಕ ಪವನ್‌ ಎಂಬಾತನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಂಡ್ಯ ನಿವಾಸಿ ಪವನ್‌ನನ್ನು ಇಂದು ಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಗ ಮಧ್ಯೆ ವಾಹನ ನಿಲ್ಲಿಸಿದ ಚಾಲಕ ಅದರಲ್ಲಿದ್ದ ಒಂದು ಲಾಕರ್ ಒಡೆದು 99 ಲಕ್ಷ ರೂ. ತೆಗೆದುಕೊಂಡು ವಾಹನವನ್ನು ಲಿಂಗರಾಜ ಪುರ ಬಳಿ ಬಿಟ್ಟು ಪರಾರಿಯಾಗಿದ್ದ. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಮಂಡ್ಯ ಮೂಲದ ಪವನ್‌ನನ್ನು ಇಂದು ಬೆಳಗ್ಗೆ ಬಂಧಿಸಿ,ಹಣವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಎಟಿಎಂ ಕೇಂದ್ರಗಳಿಗೆ ಹಣ ಹಾಕುವ ರೈಟರ್ಸ್ ಏಜೆನ್ಸಿಯ ಚಾಲಕನಾಗಿದ್ದ ಪವನ್ , ರೈಟರ್ಸ್ ಏಜೆನ್ಸಿಯ ವಾಹನದಲ್ಲಿ ಶುಕ್ರವಾರ ಸಂಜೆ 4 ಗಂಟೆ ವೇಳೆ ಕಮ್ಮನಹಳ್ಳಿ ಮುಖ್ಯರಸ್ತೆಯ ಐಸಿಐಸಿಐ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ಹಣ ಹಾಕಲು ಗನ್ ಮ್ಯಾನ್ ಸೇರಿ ಮೂವರೊಂದಿಗೆ ಬಂದಿದ್ದ. ಎಟಿಎಂ ಕೇಂದ್ರದಲ್ಲಿ ಹಣ ಹಾಕಲು ಒಬ್ಬರು ಹೋಗಿದ್ದು, ಇನ್ನಿಬ್ಬರು ಗನ್ ಮ್ಯಾನ್‌ಗಳು ಎಟಿಎಂ ಹೊರಗೆ ಕಾಯುತ್ತಿದ್ದಾಗ ಪವನ್, ವಾಹನದೊಂದಿಗೆ ಪರಾರಿಯಾಗಿದ್ದ.

ವಾಹನವನ್ನು ಲಿಂಗರಾಜಪುರದ ಬಳಿಗೆ ತಂದು ಅದರಲ್ಲಿದ್ದ 99 ಲಕ್ಷ ರೂ. ನಗದು ದೋಚಿ, ಕೋಟ್ಯಂತರ ಹಣವಿದ್ದ ಲಾಕರ್‌ಗಳನ್ನು ಒಡೆಯಲು ವಿಫಲ ಯತ್ನ ನಡೆಸಿದ್ದಾನೆ. ಆದರೆ ಅದು ಸಾಧ್ಯವಾಗದಿದ್ದಾಗ ವಾಹನವನ್ನು ಅಲ್ಲೇ ಬಿಟ್ಟು ಹಣದೊಂದಿಗೆ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com