ಬಂಡೀಪುರ ರಾತ್ರಿ ಸಂಚಾರ ನಿಷೇಧರಿಂದ ಕೇರಳ, ಕರ್ನಾಟಕ ಜನರಿಗೆ ಸಂಕಷ್ಟ: ರಾಹುಲ್ ಗಾಂಧಿ

ಬಂಡೀಪುರ ಮೀಸಲು ಅರಣ್ಯ ವ್ಯಾಪ್ತಿಯ ಮೂಲಕ  ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಬತ್ತು ಗಂಟೆಗಳ ಸಂಚಾರ ನಿಷೇಧವು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ತೊಂದರೆ ಉಂಟುಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಬಂಡೀಪುರ ಮೀಸಲು ಅರಣ್ಯ ವ್ಯಾಪ್ತಿಯ ಮೂಲಕ  ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಬತ್ತು ಗಂಟೆಗಳ ಸಂಚಾರ ನಿಷೇಧವು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ತೊಂದರೆ ಉಂಟುಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.ಹಾಗೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಥಳೀಯ ಜನಸಮುದಾಯದ ಹಿತಾಸಕ್ತಿಯನ್ನು ಕಾಪಾಡುವತ್ತ ಗಮನಿಸಬೇಕೆಂದು ಮನವಿ ಮಾಡಿದ್ದಾರೆ.

ಹುಲಿ ಮೀಸಲು ಅರಣ್ಯದ ಮೂಲಕ ಹಾದು ಹೋಗುವ ಹೆದ್ದಾರಿ ಸಂಚಾರವನ್ನು ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ನಿಷೇಧಿಸಲಾಗಿದೆ.

ಮೀಸಲು ಅರಣ್ಯದ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧ ವನ್ಯಜೀವಿಗಳಿಗೆ ತೊಂದರೆ ಕಡಿಮೆಗೊಳಿಸುವ ಉದ್ದೇಶ ಹೊಂದಿದೆ.ಕೇರಳದ ವಯನಾಡು ಸಂಸದರಾಗಿರುವ ರಾಹುಲ್ ಗಾಂಧಿ ರಾಷ್ಟ್ರೀಯ ಹೆದ್ದಾರಿ ರಾತ್ರಿ ಸಂಚಾರ ನಿಷೇಧ ಖಂಡಿಸಿ ಸೆಪ್ಟೆಂಬರ್ 25 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿರುವ ಯುವಕರಿಗೆ ಬೆಂಬಲ ಸೂಚಿಸಿದ್ದಾರೆ.

"ಸೆಪ್ಟೆಂಬರ್ 25 ರಿಂದ ಎನ್‌ಎಚ್ -766ರಲ್ಲಿ 9 ಗಂಟೆಗಳ ಸಂಚಾರ ನಿಷೇಧವನ್ನು ವಿರೋಧಿಸಿ ನಡೆಸುತ್ತಿರುವ  ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ನಾನು ಯುವಕರೊಂದಿಗೆ ನಿಲ್ಲುತ್ತೇನೆ.ಇದು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ಅಪಾರ ತೊಂದರೆಗಳನ್ನುಂಟು ಮಾಡಿದೆ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಟ್ವೀಟ್ ಮೂಲಕ ಹೇಳಿದ್ದಾರೆ.

"ನಮ್ಮ ಪರಿಸರವನ್ನು ರಕ್ಷಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ಎತ್ತಿಹಿಡಿಯುವುದರೊಂದಿಗೆ ಸ್ಥಳೀಯ ಜನಸಮುದಾಯಗಳ ಹಿತಾಸಕ್ತಿಗಳನ್ನು ಕಾಪಾಡುವಂತೆ ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸುತ್ತೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದ ವಯನಾಡ್ ಮತ್ತು ಕರ್ನಾಟಕದ ಮೈಸೂರನ್ನು ಸಂಪರ್ಕಿಸುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುವ ಹೆದ್ದಾರಿಯನ್ನು ರಾತ್ರಿ ಸಂಚಾರಕ್ಕೆ ಅನುವು ಮಾಡಬೇಕೆಂದು ಕೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com