ಪ್ರಜ್ವಲ್ ರೇವಣ್ಣ ಆಸ್ತಿ ವಿವಾದ: ಆಕ್ಷೇಪಣೆಗೆ 2 ವಾರ ಕಾಲಾವಕಾಶ ನೀಡಿದ ಕೋರ್ಟ್

ಚುನಾವನಾ ಆಯೋಗಕ್ಕೆ ತಪ್ಪು ಆಸ್ತಿ ಪ್ರಮಾಣಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಎರಡು ವಾರಗಳ ಗಡುವು ನೀಡಿದೆ. 
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಬೆಂಗಳೂರು:  ಚುನಾವನಾ ಆಯೋಗಕ್ಕೆ ತಪ್ಪು ಆಸ್ತಿ ಪ್ರಮಾಣಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಎರಡು ವಾರಗಳ ಗಡುವು ನೀಡಿದೆ.

ಮಾಜಿ ಸಚಿವ ಹಾಗೂ ಪರಾಜಿತ ಅಭ್ಯರ್ಥಿ ಎ.ಮಂಜು ಮತ್ತು ವಕೀಲರಾದ ಜಿ.ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವಿಚಾರಣೆಯನ್ನು ಮುಂದೂಡಿದರು. 

ಕಳೆದ ಲೋಕಸಭೆ ಚುನಾವಣೆಯ ವೇಳೆ ಹಾಸದ ಮೈತ್ರಿ ಅಭ್ಯರ್ಥಿಯಾಗಿದ್ದ  ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ತಮ್ಮ ನಾಮಪತ್ರದ ಜತೆ ಸಲ್ಲಿಸಿದ್ದ ದಾಖಲೆಗಳ ಕುರಿತಂತೆ ಅವರ ಎದುರಾಳಿ ಬಿಜೆಪಿಯ ಎ. ಮಂಜು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com