ಸಿದ್ದಗಂಗಾ ಸ್ವಾಮೀಜಿ ಜಯಂತಿ: ಪ್ರಧಾನಿ ಸೇರಿ ಗಣ್ಯರ ಗೌರವ ನಮನ

ತುಮಕೂರಿನ ಸಿದ್ದಗಂಗಾ ಮಠದ ದಿ. ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಗೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಗಣ್ಯರು ಶುಭಕೋರಿ, ಸ್ವಾಮೀಜಿಯ ಕೊಡುಗೆಯನ್ನು ಸ್ಮರಿಸಿದ್ದಾರೆ.
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ
Updated on

ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ದಿ. ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಗೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಗಣ್ಯರು ಶುಭಕೋರಿ, ಸ್ವಾಮೀಜಿಯ ಕೊಡುಗೆಯನ್ನು ಸ್ಮರಿಸಿದ್ದಾರೆ.

ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ ಎಂದು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಪ್ರಧಾನಿ ಸ್ವಾಮೀಜಿಯವರನ್ನು ಸ್ಮರಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಕಾಯಕ ಯೋಗಿ, ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹದ ಮೂಲಕ ಬದುಕು ಕೊಟ್ಟ ಮಹಾ ಪುರುಷ ಸಿದ್ದಗಂಗೆಯ ಸಿದ್ಧಿಪುರುಷ, ಲಿಂಗೈಕ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರ ಚರಣಗಳಿಗೆ ಕೋಟಿ ನಮನಗಳು ಎಂದು ಸ್ಮರಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com