ಕೊರೋನಾ ಪರಿಣಾಮ: ರಾಜ್ಯದ 383 ವಿಚಾರಣಾಧೀನ ಕೈದಿಗಳ ಬಿಡುಗಡೆಗೆ ತೀರ್ಮಾನ

ಕೊವಿಡ್- 19 ವೈರಸ್‌ ಹರಡುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ 180 ಖೈದಿಗಳೂ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 383 ವಿಚಾರಣಾಧೀನ ಕೈದಿಗಳಿಗೆ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಪರಪ್ಪನ ಅಗ್ರಹಾರ ಕಾರಾಗೃಹ
ಪರಪ್ಪನ ಅಗ್ರಹಾರ ಕಾರಾಗೃಹ
Updated on

ಬೆಂಗಳೂರು: ಕೊವಿಡ್- 19 ವೈರಸ್‌ ಹರಡುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ 180 ಖೈದಿಗಳೂ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 383 ವಿಚಾರಣಾಧೀನ ಕೈದಿಗಳಿಗೆ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಪರಪ್ಪನ ಅಗ್ರಹಾರ ಸೇರಿ ವಿವಿಧ ಕಾರಾಗೃಹಗಳಲ್ಲಿನ 383 ಕೈದಿಗಳನ್ನು 2 ಹಂತಗಳಲ್ಲಿ ಬಿಡುಗಡೆ ಮಾಡಲಿದ್ದು, ಮೊದಲ ಹಂತದಲ್ಲಿ 7 ವರ್ಷದೊಳಗಿನ ಶಿಕ್ಷೆ ಇರುವ ಪ್ರಕರಣಗಳಲ್ಲಿ ಆರೋಪಿಗಳಾಗಿ ಜೈಲಿಗೆ ಬಂದು ಇನ್ನೂ ವಿಚಾರಣೆ ಎದುರಿಸುತ್ತಿರವವರನ್ನು ಬಿಡುಗಡೆ ಮಾಡಲಾಗುತ್ತದೆ.

ಕೊರೋನಾ ವೈರಸ್ ಖೈದಿಗಳಿಗೆ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಳೆದ ಮಾ.23 ರಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾರ್ಯನಿರ್ವಾಹಕ ನಿರ್ದೇಶಕರೂ ಆಗಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವ ಉನ್ನತಾಧಿಕಾರ ಸಮಿತಿಯು ಮಧ್ಯಂತರ ಜಾಮೀನು ನೀಡುವ ಕುರಿತು ಮಾರ್ಗಸೂಚಿ ರಚಿಸಿತ್ತು. ಅದರನ್ವಯ ಕಾರಾಗೃಹಗಳಲ್ಲಿನ ವಿಚಾರಣಾಧೀನ ಖೈದಿಗಳಿಗೆ ಜಾಮೀನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಬುಧವಾರ 323 ಮಂದಿಗೆ ಜಾಮೀನು ನೀಡಲಾಗಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜು ತಿಳಿಸಿದ್ದಾರೆ.

ಕಳ್ಳತನ, ಸುಲಿಗೆ, ಸರಗಳ್ಳತನ, ವಂಚನೆಯಂತಹ ಪ್ರಕರಣಗಳಲ್ಲಿ ಪರಪ್ಪನ ಅಗ್ರಹಾರದ ಜೈಲಿನ 180 ಮಂದಿ ವಿಚಾರಣಾಧೀನ ಬಂಧಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ರಾಜ್ಯದ ವಿವಿಧ ಕಾರಾಗೃಹಗಳ 200 ಮಂದಿಯ ಪಟ್ಟಿ ಸಿದ್ಧವಾಗಿದೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.

ಮೊದಲ ಹಂತದಲ್ಲಿ 213 ಪಟ್ಟಿ ಸಿದ್ಧಪಡಿಸಲಾಗಿದ್ದು, 2ನೇ ಹಂತದಲ್ಲಿ ಸಜಾ ಬಂಧಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಮೊದಲು ವಿಚಾರಣಾಧೀನ ಬಂಧಿಗಳನ್ನು ಬಿಡುಗಡೆಗೊಳಿಸಿದ ನಂತರ ಸಜಾ ಬಂಧಿಗಳ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು.

ವಿಚಾರಣಾಧೀನ ಬಂಧಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದರೆ, ಸಜಾ ಬಂಧಿಗಳನ್ನು ಪರೋಲ್ ಮೇಲೆ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com