ಮೈಸೂರು: ವಾರದಲ್ಲಿ 3 ದಿನ ಕೋಳಿ ಮಾಂಸ ಮಾರಾಟಕ್ಕೆ ಅನುಮತಿ

ಮೈಸೂರಿನ ಕೆಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಡ ಪರಿಣಾಮ ಕೋಳಿ ಮಾಂಸ ಮಾರಾಟಕ್ಕೆ ಹೇರಲಾಗಿದ್ದ ನಿಷೇಧವನ್ನು ಅಧಿಕಾರಿಗಳು ಇದೀಗ ತೆರವುಗೊಳಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಮೈಸೂರಿನ ಕೆಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಡ ಪರಿಣಾಮ ಕೋಳಿ ಮಾಂಸ ಮಾರಾಟಕ್ಕೆ ಹೇರಲಾಗಿದ್ದ ನಿಷೇಧವನ್ನು ಅಧಿಕಾರಿಗಳು ಇದೀಗ ತೆರವುಗೊಳಿಸಿದ್ದಾರೆ. 

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರದಲ್ಲಿ 3 ದಿನ ಮಾತ್ರ ಬೆಳಿಗ್ಗೆ 6ರಿಂದ ಸಂಜೆ6 ಗಂಟೆವರೆಗೆ ಕೋಳಿ ಮಾಂಸ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇದೇ ರೀತಿಯಲ್ಲಿಯೇ ಕುರಿ ಮಾಂಸಕ್ಕೂ ವಾರದಲ್ಲಿ ಮೂರು ದಿನಗಳ ಕಾಲ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅಲ್ಲದೆ, ಕೆಜಿ ಮಾಂಸಕ್ಕೆ ರೂ.500ಕ್ಕಿಂತಲೂ ಹೆಚ್ಚಿಗೆ ಮಾರಾಟ ಮಾಡುವಂತಿಲ್ಲ ಎಂದೂ ಕೂಡ ಸೂಚನೆ ನೀಡಲಾಗಿದೆ. ಮಾಂಸ ಮಾರಾಟ ಮಾಲೀಕರು ಅಂಗಡಿಗಳನ್ನು ವಾರದಲ್ಲಿ ಮೂರು ದಿನ ಅಂದರೆ, ಮಂಗಳವಾರ, ಶುಕ್ರವಾರ ಹಾಗೂ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ತೆರೆಯಲಬಹುದು ಎಂದು ಕಟ್ಟುನಿಟ್ಟಿನ ನಿಯಮಗಳನ್ನು ಹೇರಿದೆ. 

ಮಾರ್ಚ್ 16ರಂದು ಕುಂಬಾರಕೊಪ್ಪಲು ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿತ್ತು. ಮಾರ್ಚ್ 28 ರಿಂದ ಈ ಪ್ರದೇಶದಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಂಬಂದಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದ ಹಿನ್ನಲೆಯಲ್ಲಿ ಕೋಳಿ ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com