ಅಕ್ರಮ ಮದ್ಯ ಸಂಗ್ರಹ: ಇಬ್ಬರ ಬಂಧನ, ಮದ್ಯದ ಬಾಟಲ್ ಗಳು ವಶ

ಅಕ್ರಮ ಮದ್ಯ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿರುವ ಬೆಂಗಳೂರು ಅಪರಾಧ ವಿಭಾಗದ ಪೊಲೀಸರು 1.25 ಲಕ್ಷ ರೂಪಾಯಿ ಮೌಲ್ಯದ ಲಿಕ್ಕರ್ ಬಾಟಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಅಕ್ರಮ ಮದ್ಯ
ವಶಪಡಿಸಿಕೊಂಡ ಅಕ್ರಮ ಮದ್ಯ
Updated on

ಬೆಂಗಳೂರು: ಅಕ್ರಮ ಮದ್ಯ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿರುವ ಬೆಂಗಳೂರು ಅಪರಾಧ ವಿಭಾಗದ ಪೊಲೀಸರು 1.25 ಲಕ್ಷ ರೂಪಾಯಿ ಮೌಲ್ಯದ ಲಿಕ್ಕರ್ ಬಾಟಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿರುವುದರಿಂದ ಮದ್ಯ ಮಾರಾಟವನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಆದರೆ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದಾರೆ ಎಂದು ಮಾಹಿತಿ ಪಡೆದ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದಾಗ ಸುಮಾರು 1.25 ಲಕ್ಷ ಮೌಲ್ಯದ ಮದ್ಯದ ಬಾಟಲ್ ಗಳು ಸಿಕ್ಕಿವೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ ಎಂದು ಬೆಂಗಳೂರು ಅಪರಾಧ ಪೊಲೀಸ್ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com