ರಾಜ್ಯ
ಮನೆಗೆಲಸದವರು, ಸಹಾಯಕರು, ವಾಹನ ಚಾಲಕರಿಗೆ ಮಾಲೀಕರು ವೇತನ ಕಡಿತ ಮಾಡಬೇಡಿ: ಬಿ.ಎಸ್. ಯಡಿಯೂರಪ್ಪ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಲಸಕ್ಕೆ ಬಾರಲು ಸಾಧ್ಯವಾಗದ ಕಾರ್ಮಿಕರ ವೇತನವನ್ನು ಅವರ ಮಾಲೀಕರು ಸದ್ಯದ ಪರಿಸ್ಥಿತಿಯಲ್ಲಿ ಕಡಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಂಗಳೂರು: ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಲಸಕ್ಕೆ ಬಾರಲು ಸಾಧ್ಯವಾಗದ ಕಾರ್ಮಿಕರ ವೇತನವನ್ನು ಅವರ ಮಾಲೀಕರು ಸದ್ಯದ ಪರಿಸ್ಥಿತಿಯಲ್ಲಿ ಕಡಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಕೊರೋನಾ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದ ಮನೆಗೆಲಸದವರು, ಸಹಾಯಕರು ಮತ್ತು ವಾಹನ ಚಾಲಕರಿಗೆ ಮಾಲೀಕರು ವೇತನ ಕಡಿತ ಮಾಡಬೇಡಿ. ಆರ್ಥಿಕ ಸಂಕಷ್ಟದ ಈ ಸಮಯದಲ್ಲಿ ಕಾರ್ಮಿಕರಿಗೆ, ಕೂಲಿ ಕೆಲಸದವರಿ, ಬಡವರಿಗೆ ಸಹಾನುಭೂತಿಯಿಂದ ನೆರವಾಗಿ ಎಂದು ಮಾಲೀಕರನ್ನು ಮುಖ್ಯಮಂತ್ರಿಗಳು ಕೋರಿಕೊಂಡಿದ್ದಾರೆ.

