ನಾನು ಮತ್ತು ಶ್ರೀರಾಮುಲು ಅಣ್ಣ-ತಮ್ಮಂದಿರಂತೆ, ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ:ಡಾ ಕೆ ಸುಧಾಕರ್

ಆರೋಗ್ಯ ಸಚಿವ ಶ್ರೀರಾಮುಲು ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಮತ್ತು ಶ್ರೀರಾಮುಲು ಅಣ್ಣ ತಮ್ಮಂದಿರಂತೆ ಈ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಕೆ ಸ್ಪಷ್ಟಪಡಿಸಿದ್ದಾರೆ.
ಸಚಿವರಾದ ಶ್ರೀರಾಮುಲು ಮತ್ತು ಡಾ ಕೆ ಸುಧಾಕರ್
ಸಚಿವರಾದ ಶ್ರೀರಾಮುಲು ಮತ್ತು ಡಾ ಕೆ ಸುಧಾಕರ್

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಮತ್ತು ಶ್ರೀರಾಮುಲು ಅಣ್ಣ ತಮ್ಮಂದಿರಂತೆ ಈ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಕೆ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿನ ಸೇವೆಯ ಉಸ್ತುವಾರಿ ವಿಚಾರದಲ್ಲಿ ಇಬ್ಬರು ಸಚಿವರ ಮಧ್ಯೆ ಭಿನ್ನಾಭಿಪ್ರಾಯವೆದ್ದು ತಾರಕಕ್ಕೇರಿದೆ, ಇಬ್ಬರನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಸಮಾಧಾನಪಡಿಸಬೇಕಾದ ಸಂದರ್ಭ ಬಂದಿದೆ ಎಂದೆಲ್ಲ ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯಾಗಿತ್ತು.

ಈ ಬಗ್ಗೆ ಇಬ್ಬರು ಸಚಿವರೂ ಇದುವರೆಗೆ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಇಂದು ಸಚಿವ ಸುಧಾಕರ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಜಗಳಗಳು ಇಲ್ಲ ಎಂದಿದ್ದಾರೆ.

ನಮ್ಮ ರಾಜ್ಯ ಸೇರಿದಂತೆ ಇಡೀ ದೇಶ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ, ನಮ್ಮದೇ ಆದ ಜವಾಬ್ದಾರಿಗಳಿವೆ. ಹೀಗಾಗಿ ನಮ್ಮ ಮಧ್ಯೆ ಭಿನ್ನಾಭಿಪ್ರಾಯಗಳಾಗಲಿ, ಜಗಳಗಳಾಗಲಿ ಇಲ್ಲ, ಕೇಳಿಬರುತ್ತಿರುವುದೆಲ್ಲ ಸುಳ್ಳು ಸುದ್ದಿ, ಇದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಡಾ ಸುಧಾಕರ್ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com