ತಬ್ಲಿಘಿಗಳಿಗೆ ಗುಂಡಿಕ್ಕಿ ಎಂದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ದಾಖಲು

ಚಿಕಿತ್ಸೆಗೆ ಸ್ಪಂದಿಸದೆ ತಪ್ಪಿಸಿಕೊಳ್ಳುವ ತಬ್ಲಿಘಿಗಳ  ಗುಂಡಿಕ್ಕಿ ಹತ್ಯೆ ಮಾಡಿ ಎಂದಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಎಂಬುವವರು ದಾವಣಗೆರೆ ಕೆಟಿಜೆ ನಗರ ಪೋಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ಸಲ್ಲಿಸಿದ್ದಾರೆ. 
ಎಂ. ಪಿ. ರೇಣುಕಾಚಾರ್ಯ
ಎಂ. ಪಿ. ರೇಣುಕಾಚಾರ್ಯ
Updated on: 

ದಾವಣಗೆರೆ: ಚಿಕಿತ್ಸೆಗೆ ಸ್ಪಂದಿಸದೆ ತಪ್ಪಿಸಿಕೊಳ್ಳುವ ತಬ್ಲಿಘಿಗಳ  ಗುಂಡಿಕ್ಕಿ ಹತ್ಯೆ ಮಾಡಿ ಎಂದಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಎಂಬುವವರು ದಾವಣಗೆರೆ ಕೆಟಿಜೆ ನಗರ ಪೋಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ಸಲ್ಲಿಸಿದ್ದಾರೆ. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಇತ್ತೀಚ್ಗೆ ಮಾದ್ಯಮಗಳೊಂದಿಗೆ ಮಾತನಾಡುತ್ತಾ "ಚಿಕಿತ್ಸೆಗೆ ಸ್ಪಂದಿಸದ ತಬ್ಲಿಘಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದರೂ ತಪ್ಪಲ್ಲ" ಎಂದು ಹೇಳಿಕೆ ನೀಡಿದ್ದರು. 

ಶಾಸಕರು ಸಮಾಜದಲ್ಲಿ ಶಾಂತಿ ಕದಡುವಂತಹಾ ಹೇಳಿಕೆ ನೀಡಿರುವ ಕಾರಣ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹಾಗೆಯೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿ ಸ್ಥಾನದಿಂದ ಉಚ್ಚಾಟಿಸಬೇಕು ಎಂದು ಸುಭಾಷ್ ಚಂದ್ರ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com