ಲಂಡನ್ ಮಾಜಿ ಮೇಯರ್ ಕನ್ನಡಿಗ ನೀರಜ್ ಪಾಟೀಲ್ ಕೊರೋನಾ ಸೋಂಕು

ಇಂಗ್ಲೆಂಡ್‌ನ‌ ಲ್ಯಾಂಬೆತ್‌ ನಗರದ ಮಾಜಿ ಮೇಯರ್‌ ಕನ್ನಡಿಗ ನೀರಜ್‌ ಪಾಟೀಲ್‌ ಅವರಿಗೆ ಕೋವಿಡ್ 19 ಸೋಂಕು ತಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನೀರಜ್‌ ಪಾಟೀಲ್‌ ಹೇಳಿ ಕೊಂಡಿದ್ದು, ಈ ವೈರಸ್‌ನಿಂದ ಗುಣಮುಖರಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದು, ಹೋಂ ಕ್ವಾರಂಟೈನ್‌ ಆಗಿರುವುದಾಗಿ ತಿಳಿಸಿದ್ದಾರೆ.
ನೀರಜ್ ಪಾಟೀಲ್
ನೀರಜ್ ಪಾಟೀಲ್

ಬೆಂಗಳೂರು: ಇಂಗ್ಲೆಂಡ್‌ನ‌ ಲ್ಯಾಂಬೆತ್‌ ನಗರದ ಮಾಜಿ ಮೇಯರ್‌ ಕನ್ನಡಿಗ ನೀರಜ್‌ ಪಾಟೀಲ್‌ ಅವರಿಗೆ ಕೋವಿಡ್ 19 ಸೋಂಕು ತಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನೀರಜ್‌ ಪಾಟೀಲ್‌ ಹೇಳಿ ಕೊಂಡಿದ್ದು, ಈ ವೈರಸ್‌ನಿಂದ ಗುಣಮುಖರಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದು, ಹೋಂ ಕ್ವಾರಂಟೈನ್‌ ಆಗಿರುವುದಾಗಿ ತಿಳಿಸಿದ್ದಾರೆ.

ಈ ರೋಗದ ಬಗ್ಗೆ ಆರಂಭದಲ್ಲಿ ನಿರ್ಲಕ್ಷ್ಯ ಮಾಡಿರುವುದು ಸೋಂಕು ತಗುಲಲು ಕಾರಣವಾಗಿರಬಹುದು. ಆದರೆ ಈಗ ಹೋಂ ಕ್ವಾರಂಟೈನ್‌ ಮಾಡಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಈ ವೈರಸ್‌ನಿಂದ ಹೊರ ಬರಲು ಪ್ರಯತ್ನಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಬಹುಶಃ ನಾನು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದರಲ್ಲಿ ವಿಫಲನಾಗಿದ್ದೇನೆ ಎನಿಸುತ್ತದೆ. ನಾನು ಸದಾ ಜಿಮ್ ಮಾಡುತ್ತಿದ್ದೆ, ಡಯಟ್ ಮಾಡುತ್ತಿದ್ದೆ. ಹೀಗಾಗಿ ನನ್ನಲ್ಲಿ ರೋಗ ನಿರೋಧಕ ಶಕ್ತಿ ಚೆನ್ನಾಗಿದೆ. ನಾನು ಆದಷ್ಟು ಬೇಗ ಗುಣಮುಖನಾಗಿ ಮತ್ತೆ ಕರ್ತವ್ಯಕ್ಕೆ ವಾಪಸ್ಸಾಗುತ್ತೇನೆ ಎಂದು ನೀರಜ್ ಹೇಳಿಕೊಂಡಿದ್ದಾರೆ.

ಸ್ವತಃ ವೈದ್ಯರಾಗಿರುವ ನೀರಜ್ ಪಾಟೀಲ್ ಅವರು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಸೋಂಕಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸ್ವತಃ ನೀರಜ್ ಅವರೇ ಪ್ರತಿಕ್ರಿಯಿಸಿದ್ದಾರೆ. ನಾನು ತೀವ್ರ ಚಳಿ ಜ್ವರ ಹಾಗೂ ಚೆಸ್ಟ್ ಇನ್‍ಫೆಕ್ಷನ್‍ನಿಂದ ಬಳಲುತ್ತಿದ್ದೇನೆ. ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ ಸೆಲ್ಫ್ ಇಸೋಲೇಷನ್‍ನಲ್ಲಿ ಇದ್ದೇನೆ. ಎಲ್ಲರಿಂದ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ. ನನಗೆ ಈ ಸೋಂಕು ತಗುಲುತ್ತದೆ ಎಂದು ಕನಸಲ್ಲೂ ನಾನು ಊಹಿಸಿರಲಿಲ್ಲ ಎಂದು ಹೇಳಿದ್ದಾರೆ. ಶೀಘ್ರವೇ ಗುಣಮುಖವಾಗಿ ವಾಪಾಸಾಗುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com