ಚಾಮರಾಜನಗರ: ಜೂಜು ಅಡ್ಡೆ ಮೇಲೆ ದಿಢೀರ್ ದಾಳಿ, 25 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಲಾಕ್​ಡೌನ್​ ವೇಳೆ ಜೂಜಾಟಕ್ಕಿಳಿದಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೊಳ್ಳೇಗಾಲ,(ಚಾಮರಾಜನಗರ): ಲಾಕ್​ಡೌನ್​ ವೇಳೆ ಜೂಜಾಟಕ್ಕಿಳಿದಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇಕ್ಕಡಹಳ್ಳಿ, ತೇರಂಬಳ್ಳಿ, ಮಧುವನ ಹಳ್ಳಿ ಗ್ರಾಮಗಳ ಜಮೀನುಗಳಲ್ಲಿ ಜೂಜಾಟಕ್ಕೆ ಇಳಿಯುತ್ತಿದ್ದ ಗುಂಪಿನ ಮೇಲೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‌ಇನ್ಸ್​ಪೆಕ್ಟರ್ ವಿ ಸಿ ಅಶೋಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿತು.

ದಾಳಿ ವೇಳೆ, 39,110 ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ 25 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ದೇಶಾದ್ಯಂತ ಲಾಕ್​ಡೌನ್ ಆದೇಶವಿದೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಇವೆಲ್ಲದಕ್ಕೂ ತಲೆ ಕೆಡಿಸಿಕೊಳ್ಳದ ಗುಂಪೊಂದು ಸಾರ್ವಜನಿಕ ಸ್ಥಳಗಳಲ್ಲೇ ಜೂಜಾಟಕ್ಕಿಳಿದಿದ್ದಾರೆ. ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಟಕ್ಕೆ ಇಳಿದಿದ್ದ ಜೂಜುಕೋರರ ಹೆಡೆಮುರಿಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com