ಬೆಂಗಳೂರು ಅಷ್ಟೇ ಅಲ್ಲ, ರಾಜ್ಯದಾದ್ಯಂತ ಫೀವರ್ ಕ್ಲಿನಿಕ್ ಸ್ಥಾಪಿಸಲು ಚಿಂತನೆ

ಬೆಂಗಳೂರು ನಗರವಷ್ಟೇ ಅಲ್ಲದೆ, ರಾಜ್ಯದಾದ್ಯಂತ ಫೀವರ್ ಕ್ಲಿನಿಕ್ ಗಳನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರು ನಗರವಷ್ಟೇ ಅಲ್ಲದೆ, ರಾಜ್ಯದಾದ್ಯಂತ ಫೀವರ್ ಕ್ಲಿನಿಕ್ ಗಳನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. 

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಶೇ.50 ರಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಫೀವರ್ ಕ್ಲಿನಿಕ್ ಗಳನ್ನಾಗಿ ಮಾರ್ಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ನಗರದಲ್ಲಿರುವ ಫೀವರ್ ಕ್ಲಿನಿಕ್ ಗಳಂತೆಯೇ ಈ ಫೀವರ್ ಕ್ಲಿನಿಕ್ ಗಳು ನೆಗಡಿ, ಶೀತ ಹಾಗೂ ಜ್ವರದಂತಹ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಿದೆ. ಫೀವರ್ ಕ್ಲಿನಿಕ್'ಗೆ ಬರುವ ಜನರಲ್ಲಿ ವೈರಸ್ ಲಕ್ಷಣಗಳು ಕಂಡು ಬಂದಿದ್ದೇ ಆದರೆ, ಅವರನ್ನು ಸಂಬಂಧ ಪಟ್ಟಂತಹ ಆಸ್ಪತ್ರೆಗೆ ಶಿಫಾರಸು ಮಾಡುತ್ತಾರೆ. 

ಫೀವರ್ ಕ್ಲಿನಿಕ್ ಸ್ಥಾಪನೆಗೆ ಖಾಸಗಿ ಕ್ಲಿನಿಕ್ ಗಳೂ ಕೂಡ ಸಹಕಾರ ನೀಡಬಹುದು. ಅಂತಹ ಕ್ಲಿನಿಕ್ ಗಳಿಗೆ ಸರ್ಕಾರ ಪಿಪಿಇ. ಎನ್95 ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಸಲಕರಣೆಗಳನ್ನು ನೀಡಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com