ರಾಜ್ಯ

ಕೊರೋನಾ ವೈರಸ್ ವಿರುದ್ಧ ದಿಟ್ಟ ಹೋರಾಟ: ದೇಶಕ್ಕೆ ಮಾದರಿಯಾದ ಕರ್ನಾಟಕ

ಕೊರೋನಾ ವೈರಸ್ ವಿರುದ್ಧ ದಿಟ್ಟ ಹೋರಾಟ: ದೇಶಕ್ಕೆ ಮಾದರಿಯಾದ ಕರ್ನಾಟಕ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೋರೋನಾ ವೈರಸ್ ವಿರುದ್ಧ ಕರ್ನಾಟಕ ದಿಟ್ಟ ಹೋರಾಟ ನಡೆಸುತ್ತಿದ್ದು, ರಾಜ್ಯ ಸರ್ಕಾರದ ದಿಟ್ಟ ನಡೆ ಇದೀಗ ಇಡೀ ದೇಶಕ್ಕೆ ಮಾದರಿಯಾಗುತ್ತಿದೆ. 

ಕೊರೋನಾ ವೈರಸ್ ಅಪಾಯಕಾರಿ ರೀತಿಯಲ್ಲಿ ಹರಡುತ್ತಿರುವ ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಹಾಗೂ ಕೇರಳ ಸೇರಿದಂತೆ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಿದ್ದು, ದಿನಕ್ಕೆ 10 ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. 

ಮಾರ್ಚ್ 24 ರಿಂದ ಲಾಕ್ ಡೌನ್ ಆದ ಬಳಿಕ ಏಪ್ರಿಲ್ 10ರವರೆಗೂ ರಾಜ್ಯದಲ್ಲಿ 165 ಪ್ರಕರಣಗಳು ದಾಖಲಾಗಿವೆ. ಇದರಂತೆ ಈ ವರೆಗೂ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. 

ಕೊರೋನಾ ವೈರಸ್ ಕುರಿತಂತೆ ಅಪಾಯಕಾರಿ ಸುದ್ದಿಗಳು ಹೊರಬೀಳುತ್ತಿದ್ದಂತೆಯೇ ದೇಶದಲ್ಲಿ ಮೊದಲ ಬಾರಿಗೆ ರಾಜ್ಯದ ಕಲಬುರಗಿ ಜಿಲ್ಲೆಯಲ್ಲಿ ಮೊದಲ ಕೊರೋನಾ ಸಾವು ಸಂಭವಿಸಿತ್ತು. ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ ಲಾಕ್'ಡೌನ್'ಗೆ ಘೋಷಣೆ ಮಾಡಿತ್ತು. 

ದೇಶದ ಇತರೆ ರಾಜ್ಯಗಳಲ್ಲಿ ಶೇ.6-7ರಷ್ಟು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದರೆ, ಕರ್ನಾಟದಲ್ಲಿ ಶೇ.3 ರಷ್ಟು ಪ್ರಕರಣಗಳು ದಾಖಲಾಗುತ್ತಿವೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ತಜ್ಞರೊಬ್ಬರು, ಪರಿಣಾಮಕಾರಿ ಹಾಗೂ ಲಾಕ್ ಡೌನ್ ನಂತರ ದಿಟ್ಟ ನಿರ್ಧಾರ, ಸೋಂಕಿತರೊಂದಿಗೆ ಸಂಪರ್ಕ ಹೊಂದ್ದಿದ್ವರ ಶೀಘ್ರಗತಿಯ ಹುಡುಕಾಟ, ಕ್ವಾರಂಟೈನ್ ನಂತಹ ದಿಟ್ಟ ಕ್ರಮಗಳು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಲು ಸಹಕಾರಿ ಮಾಡಿದೆ ಎಂದು ಹೇಳಿದ್ದಾರೆ. 

ಸಮುದಾಯ ಹರಡುವಿಕೆ ಸೂಚನೆಗೆ ಯಾವುದೇ ಪುರಾವೆಗಳಿಲ್ಲ: ಆರೋಗ್ಯ ಇಲಾಖೆ
ಆರೋಗ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ತ್ವರಿತಗತಿಯಲ್ಲಿ ಸೋಂಕಿತರನ್ನು ಹಾಗೂ ಅವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಹುಡುಕುತ್ತಿದ್ದಾರೆ. ವೈರಸ್ ಹರಡದಿರಲು ಇವರ ಪಾತ್ರ ಪ್ರಮುಖವಾಗಿದೆ ಎಂದು ಡಾ.ಮಂಜುನಾಥ್ ಅವರು ಹೇಳಿದ್ದಾರೆ. 

ಈ ವರೆಗೂ 7,975 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ 7,673 ಮಂದಿಯ ವರದಿ ನೆಗೆಟಿವ್ ಬಂದಿದೆ. 207 ಮಂದಿಯಲ್ಲಿ ಮಾತ್ರ ವೈರಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. 

ಮುಂದಿನ 2-3 ದಿನಗಳಲ್ಲಿ ಮತ್ತಷ್ಟು ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತದೆ. ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಕರ್ನಾಟಕ ಅತ್ಯಂತ ಶೀಘ್ರಗತಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಆರಂಭದಲ್ಲಿಯೇ ಅಂತರಾಷ್ಟ್ರೀಯ ಪ್ರಯಾಣಿಕರನ್ನು ಕ್ವಾರಂಟೈನ್ ನಲ್ಲಿಟ್ಟು ಸೂಕ್ತ ಕ್ರಮ ಕೈಗೊಂಡಿತ್ತು ಎಂದು ರಾಜೀವ್ ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ.ನಾಗರಾಜ್ ಅವರು ಹೇಳಿದ್ದಾರೆ. 

ಲಾಕ್ ಡೌನ್ ನಿಂದ ವೈರಸ್ ಹರಡುವುದು ನಿಯಂತ್ರಣಗೊಂಡಿದೆ. ಪರಿಣಾಮಕಾರಿ ಕ್ರಮಗಳಿಂದಾಗಿ ವೈರಸ್ ಸಮುದಾಯ ಹಂತ ತಲುಪಲು ಸಾಧ್ಯವಾಗಲಿಲ್ಲ. ಇದೀಗ ರಾಜ್ಯದಲ್ಲಿ ವೈರಸ್ ಸಮುದಾಯ ಹಂತ ತಲುಪಿದೆ ಎಂಬುದನ್ನು ಸೂಚಿಸಲೂ ಕೂಡ ಯಾವುದೇ ಪುರಾವೆಗಲೇ ಇಲ್ಲ. ಪ್ರಸ್ತುತ ವೈರಸ್ ಪತ್ತೆಯಾಗಿರುವವರ ಕುರಿತು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಲು ಮಾಹಿತಿ ನೀಡಿದ್ದಾರೆ. 

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ವೈರಸ್ ಮತ್ತಷ್ಟು ಹರಡುವ ಸಾಧ್ಯತೆಗಳಿದ್ದು, ರಾಜ್ಯ ಸರ್ಕಾರ ಮತ್ತಷ್ಟು ಕ್ರಮ ಕೈಗೊಂಡು, ಮತ್ತಷ್ಟು ಜನರನ್ನು ಪರೀಕ್ಷೆಗೊಳಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.