ರಾಜ್ಯ

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆ ಮಾಡಿ: ಆಯನೂರು ಮಂಜುನಾಥ್

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆ ಮಾಡಿ: ಆಯನೂರು ಮಂಜುನಾಥ್
ಸಂಗ್ರಹ ಚಿತ್ರ
Published On :

ಶಿವಮೊಗ್ಗ: ಕೊರೋನಾ ಸೋಂಕಿಗೆ ಒಳಗಾಗಿರುವವರ ಶುಶ್ರೂಷೆ ಮಾಡುತ್ತಿರುವ ಆರೋಗ್ಯ ಸಹಾಯಕರಿಗೆ ಆದಷ್ಟು ಬೇಗ ವೇತನ ಬಿಡುಗಡೆ ಮಾಡುವಂತೆ ಮಾಜಿ ಸಂಸದ, ಮೇಲ್ಮನೆಯ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು  ಒತ್ತಾಯಿಸಿದ್ದಾರೆ.

ಶನಿವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಹಾಯಕ, ಸಹಾಯಕಿಯರು ಅಳಲು ತೋಡಿಕೊಂಡಿದ್ದು, ಕಳೆದ ಮೂರು ತಿಂಗಳಿನಿಂದ ವೇತನ‌‌  ಬಿಡುಗಡೆಯಾಗಿಲ್ಲ. ಮಹಾಮಾರಿ ಕೊರೊನಾ ವೈರಸ್ ರೋಗ ಹೆಚ್ಚುತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಆರೋಗ್ಯ ಸಹಾಯಕರು ಹಗಲು-ರಾತ್ರಿ ಎನ್ನದೇ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಇವರಲ್ಲಿ ಅದೆಷ್ಟೋ ಸಹಾಯಕರು ಮನೆಗೂ ಹೋಗದೇ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಕೈಹಿಡಿದಿರುವ ಆರೋಗ್ಯ ಸಹಾಯಕರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವುದು ವಿಷಾದನೀಯ. ಇದು ಕೇವಲ  ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗಳ ಸಹಾಯಕರ ಅಳಲಷ್ಟೇ ಆಗಿರದೇ ರಾಜ್ಯದ ಹಲವು ಆಸ್ಪತ್ರೆಗಳ ಸಹಾಯಕರ ನೋವು ಸಹ ಆಗಿದೆ ಎಂದು ಹೇಳಿದ್ದಾರೆ.

ಆದ್ದರಿಂದ ಸರ್ಕಾರದ ಆರ್ಥಿಕ ಇಲಾಖೆಯಿಂದ ಆರೋಗ್ಯ ಸಹಾಯಕರಿಗೆ ಬಿಡುಗಡೆಯಾಗಬೇಕಿರುವ ವೇತನವನ್ನು ಬಿಡುಗಡೆಗೊಳಿಸುವಂತೆ ಆಯನೂರು ಮಂಜುನಾಥ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.