ರಾಜ್ಯ

ಕದಿರೇನಹಳ್ಳಿಯ ಮನೋಜ್ ಕೊಲೆ‌: ಐವರು ಕೊಲೆ ಆರೋಪಿಗಳ ಬಂಧನ

ಕದಿರೇನಹಳ್ಳಿಯ ಮನೋಜ್ ಕೊಲೆ‌: ಐವರು ಕೊಲೆ ಆರೋಪಿಗಳ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕದಿರೇನಹಳ್ಳಿಯ ಮನೋಜ್  ಕೊಲೆ‌ ಪ್ರಕರಣಕ್ಕೆ  ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ರೋಹಿಣಿ ಕಟೋಚ್ ತಿಳಿಸಿದ್ದಾರೆ.

ರಜತ್ ಅಲಿಯಾಸ್ ರಜಿ, ವರುಣ್ ಅಲಿಯಾಸ್ ಮೆಡ್ಡ ಶ್ರೀನಿವಾಸ್ ಅಲಿಯಾಸ್ ಸೀನ ನವೀನ, ಹಾಗೂ ಗುರು ಎಂಬಾತನ್ನು ಬಂಧಿಸಿರುವ ಸುಬ್ರಮಣ್ಯಪುರ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದರು.

ವಿಚಾರಣೆ ವೇಳೆ ಆರೋಪಿಗಳು, ತಾವು ಮುಕುಂದನನ್ನು ಕೊಲೆ ಮಾಡಲು ತೆರಳಿದ್ದಾಗ ಬಹಳ ಕತ್ತಲೆ ಇದ್ದ ಕಾರಣ ಮನೋಜನನ್ನು ಮುಕುಂದನ ಗ್ಯಾಂಗ್ ಎಂದು ಭಾವಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದೆವು. ನಂತರ ಆತ ತಮ್ಮ‌ ಗ್ಯಾಂಗ್ ನ ಮನೋಜ್ ಎಂದು ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದೆವು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮನೋಜ್ ಮೃತಪಟ್ಟಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ ಎಂದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.