ಕಲಬುರಗಿ: ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ಸಾವು

ಭಾರಿ ಮಳೆಯ ಪರಿಣಾಮ ಸಿಡಿಲು ಬಡಿದು ಇಬ್ಬರೂ ಕುರಿಗಾಹಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಐನಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ.
ಕಲಬುರಗಿ: ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ಸಾವು
Updated on

ಕಲಬುರಗಿ: ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ.

ಭಾರಿ ಮಳೆಯ ಪರಿಣಾಮ ಸಿಡಿಲು ಬಡಿದು ಇಬ್ಬರೂ ಕುರಿಗಾಹಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಐನಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ.

ಮೃತ ಕುರಿಗಾಹಿಗಳನ್ನು ಪರಮೇಶ್ವರ್ ಮತ್ತು ಕಲ್ಲಪ್ಪ ಎಂದು ಗುರುತಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com