ಕೊರೋನಾ ಮಟ್ಟಹಾಕಲು ದಿಟ್ಟ ಕ್ರಮ: ಐಸಿಯು ರೋಗಿಗಳ ಮೇಲೆ ನಿಗಾ ಇಡಲು ಟಾಸ್ಕ್ ಫೋರ್ಸ್ ರಚನೆ

ಕೊರೋನಾಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾದ ಬೆನ್ನಲ್ಲೇ, ವೈರಸ್ ಮಟ್ಟಹಾಕಲು ರಾಜ್ಯ ಸರ್ಕಾರ ಇದೀಗ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕೊರೋನಾಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾದ ಬೆನ್ನಲ್ಲೇ, ವೈರಸ್ ಮಟ್ಟಹಾಕಲು ರಾಜ್ಯ ಸರ್ಕಾರ ಇದೀಗ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. 

ಕೊರೋನಾ ಸೋಂಕಿತರಿಗೆ ದೂರಸಂಪರ್ಕ ವ್ಯವಸ್ಥೆಯಡಿ ಉನ್ನತ ಚಿಕಿತ್ಸೆ ನೀಡಲು ಅನುಕೂಲವಾಗುವ ಟೆಲಿ ಐಸಿಯು ಗಟಕಕ್ಕೆ ವೈದ್ಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಮಂಗಳವಾರ ಚಾಲನೆ ನೀಡಿದ್ದಾರೆ. 

ಕೊರೋನಾ ಸೋಂಕಿತರಿಗೆ ಏಕರೂಪದ ಚಿಕಿತ್ಸೆ ಮತ್ತು ಸಾವು ಸಂಭವಿಸದಂತೆ ಉನ್ನತ ಚಿಕಿತ್ಸಾ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಲಿ ಐಸಿಯು ಮಹತ್ವದ ಪಾತ್ರ ನಿರ್ವಹಿಸಲಿದೆ. ರಾಜ್ಯದ ಎಲ್ಲಾ ಕೋವಿಡ್-19 ಆಸ್ಪತ್ರೆಗಳ ಜೊತೆ ಈ ಘಟಕ ನಿರಂತರ ಸಂಪರ್ಕ ಇಟ್ಟುಕೊಂಡು ರೋಗಿಗಲ ತಜ್ಞರ ಸಲಹೆ-ಸೂಚನೆ ಆಧರಿಸಿ ಚಿಕಿತ್ಸೆಗೆ ಮಾರ್ಗದರ್ ನೀಡುತ್ತದೆ ಎಂದು ಹೇಳಿದ್ದಾರೆ. 

ಮುಂದಿನ 2-3 ತಿಂಗಳು ಅತಿದೊಡ್ಡ ಸವಾಲಿನ ದಿನಗಳಾಗಿವೆ. ಅದನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಆಸ್ಪತ್ರೆಗಳು, ವೈದ್ಯರು, ತಜ್ಞರು ಮತ್ತು ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ. ಅದಕ್ಕೆ ಪೂರಕವಾಗಿ ಟೆಲಿ ಐಸಿಯು ಕಾರ್ಯ ನಿರ್ವಹಿಸಲಿದೆ. ಪರಿಣತರು, ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳು ಸೇರಿದಂತೆ 24 ಗಂಟೆಯೂ ನಾಲ್ಕು ಪಾಳಿಯಲ್ಲಿ 600ಕ್ಕೂ ಹೆಚ್ಚು ಜನ ಈ ಗಟಕದಲ್ಲಿ ಕಾರ್ಯನಿರ್ವಹಿಸಲಿದ್ದಾರೆಂದು ತಿಳಿಸಿದರು. 

ಕೋವಿಡ್-19 ಆಸ್ಪತ್ರೆಗಳಿಗೆ ಇಲ್ಲಿಂದ ರೋಗಿಗಳ ಆರೋಗ್ಯ ನೀಡಬೇಕಾದ ಚಿಕಿತ್ಸೆ, ಕೊಡಬೇಕಾದ ಔಷಧ ಮತ್ತು ಆರೈಕೆಗೆ ಸಂಬಂಧಿಸಿಜದಂತೆ ಅಗತ್ಯ ದಾಖಲಾದ ಕ್ಷಣದಿಂದ ಗುಣಮುಖರಾಗಿ ಬಿಡುಗಡೆಯಾಗುವ ತನಕ ಚಿಕಿತ್ಸೆಯ ಬಗ್ಗೆ ಸಂಪೂರ್ಣವಾಗಿ ನಿಗಾವಹಿಸಲಾಗುವುದು ಎಂದು ತಿಳಿಸಿದ ಅವರು, ಕೊರೋನಾ ವೈರಸ್ಸನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಪರಿಣತರು, ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳು ಜವಾಬ್ದಾರಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಇಲಾಕೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ರಾಜೀವ್ ಗಾಂಧಿ ಎದೆರೋಗ ವಿವಿ ಕುಲಪತಿ ಡಾ.ಸಚ್ಚಿದಾನಂದ, ಟೆಲಿ ಐಸಿಯು ಘಟಕದ ಉಸ್ತುವಾರಿ ತ್ರಿಲೋಕ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com