

ಬೆಂಗಳೂರು: ಕೊರೋನಾ ಸೋಂಕು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವವರಿಗೂ ಮತ್ತೆ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಸ್ಪತ್ರೆಯಿಂದ ಗುಣಮುಖವಾಗಿ ಬಿಡುಗಡೆಯಾದ ವ್ಯಕ್ತಿಯನ್ನು ಮನೆಯಲ್ಲಿ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿರಬೇಕೆಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಪೂರ್ಣಗುಣಮುಖರಾಗಲು ಸೂಕ್ತ ಕಾಲಾವಕಾಶಬೇಕಾಗುತ್ತದೆ. ಅಪರೂಪದ ಪ್ರಕರಣಗಳ್ಲಲಿ ಸೋಂಕು ಮತ್ತೆ ಮರುಕಳಿಸುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಹತ್ತಿರ ಇರುವವರಿಗೆ ಹಾಗೂ ಸಮುದಾಯದಲ್ಲಿನ ಜನತೆಗೆ ಸೋಂಕು ಹರಡದಂತೆ ನೋಡಿಕೊಳ್ಳಲು 14 ದಿನ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.