ಕೊರೋನಾ ಲಾಕ್ ಡೌನ್: ಏಪ್ರಿಲ್ 20ರ ನಂತರವೇ ರಾಜ್ಯದಲ್ಲಿ ನಿರ್ಬಂಧ ಸಡಿಲ

ಬೆಂಗಳೂರು; ಕೊರೋನಾ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಮ ಕ್ರಮಗಳನ್ನು ಕೈಗೊಂಡಿದ್ದು, ಏಪ್ರಿಲ್ 20ರ ಬಳಿಕವಷ್ಟೇ ರಾಜ್ಯದಲ್ಲಿ ನಿರ್ಬಂಧಗಳು ಸಡಿಲಗೊಳ್ಳಲು ಸಾಧ್ಯ ಎಂದು ಹೇಳಲಾಗುತ್ತಿದೆ.
ಮೇ.3ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಹಾಗೂ ಲಾಕ್'ಡೌನ್ ವೇಳೆ ಅನುಸರಿಸಬೇಕಾದ ನಿಯಮಗಳು, ಮಾರ್ಗದರ್ಶನಗಳನ್ನು ಕೇಂದ್ರ ಸರ್ಕಾರ ನೀಡಿದ್ದು, ಇದೀಗ ಆ ನಿಯಮಗಳನ್ನು ಅನುಸರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಈಗಾಗಲೇ ಯಡಿಯೂರಪ್ಪ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಲಾಕ್'ಡೌನ್ ನ್ನು ಸೂಕ್ತ ರೀತಿಯಲ್ಲಿ ಪಾಲನೆ ಮಾಡುವಂತೆ ಹಾಗೂ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಆದೇಶಿಸಿದ್ದಾರೆ.
ಬುಧವಾರ ಒಂದೇ ದಿನದಲ್ಲಿ ರಾಜ್ಯದಲ್ಲಿ ಒಟ್ಟು 19 ಹೊಸ ಪ್ರಕರಣಗಳು ದಾಖಲಾಗಿವೆ. ಇದರಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆಯಾಗಿದೆ.
ಲಾಕ್'ಡೌನ್ ಜೊತೆಗೆ ರಾಜ್ಯ ಸರ್ಕಾರ ವೈರಸ್ ನಿಯಂತ್ರಿಸಲು ಹಾಟ್ ಸ್ಪಾಟ್ ಗಳಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


