ಮಂಗಳೂರು: ಕಳ್ಳ ಭಟ್ಟಿ ಸಾರಾಯಿ ಅಡ್ಡೆಗೆ ಅಬಕಾರಿ ಪೊಲೀಸರ ದಾಳಿ; 400 ಲೀಟರ್ ಹುಳಿ ರಸ ವಶ

ಮಂಗಳೂರು: ನದಿ ತೀರದಲ್ಲಿ ಕಳ್ಳ ಭಟ್ಟಿ ಸಾರಾಯಿ ತಯಾರಿಸುತ್ತಿದ್ದುದನ್ನು ಪತ್ತೆ ಹಚ್ಚಿರುವ ಮಂಗಳೂರು ದಕ್ಷಿಣ ವಲಯದ ಅಬಕಾರಿ ಅಧಿಕಾರಿಗಳು 400 ಲೀಟರ್ ಹುಳಿ ರಸವನ್ನು ವಶಪಡಿಸಿಕೊಂಡಿದ್ದಾರೆ.
ಇನೊಲಿ ಗ್ರಾಮದ ನೇತ್ರಾವತಿ ನದಿಯ ದಡದಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಪಜಿಲ ಎಂಬಲ್ಲಿನ ಹೊಳೆ ಬದಿಯಲ್ಲಿ ಎರಡು ಬ್ಯಾರೇಲ್‌ಗಳಲ್ಲಿ ಭಟ್ಟಿ ಸಾರಾಯಿ ತಯಾರಿಕೆ ಗಾಗಿ ದಾಸ್ತಾನಿಸಿರುವ 400 ಲೀಟರ್ ಗಳಷ್ಟು ಹುಳಿ ರಸವನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ವಲಯದ ಅಬಕಾರಿ ನಿರೀಕ್ಷಕರು ರತ್ನಾಕರ್ ರೈ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಶೈಲಜಾ ಕೋಟೆ ಅವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ಅವರ ನೇತೃತ್ವದಲ್ಲಿ ಮಂಗಳೂರು ಉಪ ವಿಭಾಗ-1 ರ ಅಬಕಾರಿ ಉಪ ಅಧೀಕ್ಷಕರು ಶಿವಪ್ರಸಾದ್ ಮಾರ್ಗದರ್ಶನದಂತೆ ಉಪ ವಿಭಾಗ-1ರ ಎಲ್ಲಾ ಅಬಕಾರಿ ನಿರೀಕ್ಷಕರು,ಉಪ-ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಈ ಕಾರ್ಯಾಚರಣೆ ಕೈಗೊಂಡಿದ್ದರು.
ಪುತ್ತೂರಿನಲ್ಲೂ ಪೊಲೀಸ್ ಕಾರ್ಯಾಚರಣೆ; ಅಕ್ರಮ ಕಳ್ಳ ಭಟ್ಟಿ ತಯಾರಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ
ಇತ್ತ ಪುತ್ತೂರಿನಲ್ಲೂ ಕಳ್ಳಭಟ್ಟಿ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಅಕ್ರಮ ಕಳ್ಳ ಭಟ್ಟಿ ತಯಾರಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರಿನ ಪಡುವನ್ನೂರು ಗ್ರಾಮದ ಮಾಪಳ ಎಂಬಲ್ಲಿ ಅಕ್ರಮವಾಗಿ ಕಳ್ಳ ಭಟ್ಟಿ ತಯಾರಿಸುತ್ತಿದ್ದ ವೇಳೆ ಸಂಪ್ಯ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿ, ಕಳ್ಳಭಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಅರಿಯಡ್ಕ ಗ್ರಾಮದ ಶರತ್ ಕುಮಾರ್ (24ವ)ಬಂಧಿತ ಆರೋಪಿಯಾಗಿದ್ದು, ಈತನ ಜೊತೆಗಿದ್ದ ಮತ್ತೋರ್ವ ಆರೋಪಿ ಕೇಶವ ಗೌಡ ಎಂಬವರು ತಲೆಮರೆಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಸಿಕ್ಕಿದ 2 ಲೀಟರ್ ಪ್ರಮಾಣದ ಕಳ್ಳ ಭಟ್ಟಿ ಸಾರಾಯಿ ಹಾಗೂ 200 ಲೀಟರ್ ಸಾಮರ್ಥ್ಯದ ಪ್ಲಾಸ್ಟಿಕ್ ಡ್ರಮ್, 100 ಲೀಟರ್ ಹುಳಿರಸ ಹಾಗೂ ಕಳ್ಳ ಭಟ್ಟಿ ತಯಾರಿಸಲು ಬಳಸಿದ ಪಾತ್ರೆ, ಬಟ್ಟೆ, ಸಾರಾಯಿ ಮಾರಾಟದಿಂದ ಬಂದಿರುವ ರೂ.360 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


