ದುಬಾರಿ ಬೆಲೆಗೆ ಸ್ಯಾನಿಟೈಸರ್, ಮಾಸ್ಕ್ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಇದನ್ನು ತಮ್ಮ ಲಾಭವಾಗಿ ಬಳಸಿಕೊಂಡು ದುಬಾರಿಗೆ ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಇದನ್ನು ತಮ್ಮ ಲಾಭವಾಗಿ ಬಳಸಿಕೊಂಡು ದುಬಾರಿಗೆ ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. 

ದುಬಾರಿ ಬೆಲೆಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಮಾರಾಡ ಮಾಡುತ್ತಿದ್ದ 373 ಅಂಗಡಿಗಳ ಮೇಲೆ ಕಾನೂನು ಮಾಪನ ಇಲಾಖೆ ಅಧಿಕಾರಿಗಳು ದಾಳಿ  ನಡೆಸಿದ್ದು ರೂ.13 ಲಕ್ಷದಷ್ಟು ದಂಡವನ್ನು ಸ್ವೀಕರಿಸಿದ್ದಾರೆ. 

ಈ ಕುರಿತು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ವರು ಮಾಹಿತಿ ನೀಡಿದ್ದು, ಈ ವರೆಗೂ ಸುಮಾರು 5,325 ಅಂಗಡಿಗಳನ್ನು ತಪಾಸಣೆ ನಡೆಸಲಾಗಿದ್ದು, ಬಹುತೇಕ ಅಂಗಡಿಗಳಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿರುವ 12,758 ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ್ದ 99 ಅಂಗಡಿಗಳ ಪರವಾನಗಿಯನ್ನು ರದ್ದು ಪಡಿಸಲಾಗಿದೆ. ಅಲ್ಲದೆ, 16 ಪ್ರಕರಣಗಳು ಈ ವರೆಗೂ ದಾಖಲಾಗಿವೆ. ರೂ.59.3 ಲಕ್ಷದಷ್ಟು ವಸ್ತುಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. 

ಏಪ್ರಿಲ್ 18 ರಿಂದ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಹಾಗೂ ಬೇಳೆಯನ್ನು ಉಚಿತವಾಗಿ ನೀಡಲಾಗುತ್ತದೆ. ಅಲ್ಲದೆ, ಹವರು ಬಿಪಿಎಲ್ ಕಾರ್ಡ್'ಗೆ ಅರ್ಜಿ ಸಲ್ಲಿಸಿದ್ದು, ರಶೀದಿ ತೋರಿಸಿದವರಿಗೂ ಅಕ್ಕಿ, ಬೇಳೆಯನ್ನು ವಿತರಿಸಲಾಗುತ್ತದೆ. ಎಪಿಎಲ್ ಕಾರ್ಡ್ ಇರುವವರಿಗೆ 10 ಕೆಜಿ ಅಕ್ಕಿಯನ್ನು ಪ್ರತೀ ಕೆಜೆ ರೂ.15 ರಂತೆ ಹಾಗೂ 2 ಕೆಜಿ ತೊಗರಿಬೇಳೆಯನ್ನು ಎರಡು ತಿಂಗಳ ಕಾಲ ನೀಡಲಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com