ರಾಜ್ಯ

ಸೋಂಕು ಪತ್ತೆಯಾಗದ ಜಿಲ್ಲೆಗಳಲ್ಲೂ ಕೋವಿಡ್‌-19 ತಪಾಸಣೆಗೆ ಸೂಚನೆ

ಸೋಂಕು ಪತ್ತೆಯಾಗದ ಜಿಲ್ಲೆಗಳಲ್ಲೂ ಕೋವಿಡ್‌-19 ತಪಾಸಣೆಗೆ ಸೂಚನೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಇದುವರೆಗೂ ಕೊರೋನಾ ಸೋಂಕು ಪತ್ತೆಯಾಗದ ಹತ್ತು ಜಿಲ್ಲೆಗಳಲ್ಲಿ ನಾಳೆಯವರೆಗೂ ಪ್ರತಿದಿನ ಒಂದು ನೂರು ರೋಗಿಗಳ ಮಾದರಿಗಳನ್ನು ಅಧಿಕೃತ ಕೋವಿಡ್-19ರ ತಪಾಸಣಾ ಪ್ರಯೋಗಾಲಯಗಳಿಗೆ ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂಬಂಧ ಸೋಂಕು ಪತ್ತೆಯಾಗದ ರಾಮನಗರ, ಕೋಲಾರ, ಹಾಸನ, ಶಿವಮೊಗ್ಗ, ಚಾಮರಾಜನಗರ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಪತ್ರ ಬರೆದಿದ್ದಾರೆ. ಕೆಲವು‌ ತಜ್ಞರು  ಕೊರೋನಾ ಲಕ್ಷಣಗಳು‌ ಗೋಚರಿಸದಿದ್ದರೂ ಸೋಂಕು ಇರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ಹಿನ್ನೆಲೆಯಲ್ಲಿ, ತೀವ್ರ ಜ್ವರ, ಉಸಿರಾಟದ ತೊಂದರೆಯಂತಹ ಅನಾರೋಗ್ಯ ಲಕ್ಷಣವಿರುವ (ಎಸ್ ಎಆರ್ ಐ) ರೋಗಿಗಳ ಮಾದರಿಗಳನ್ನು ಪ್ರಯೋಗಾಲಯಗಳಿಗೆ  ಕಳುಹಿಸಿಕೊಡಲು ಪತ್ರದಲ್ಲಿ‌ ಸೂಚಿಸಿದ್ದಾರೆ.

Story image

ಎರಡನೇ ಹಂತದ ಲಾಕ್‌ಡೌನ್ ಜಾರಿಗೆ ಬಂದರೂ ರಾಜ್ಯದ 10 ಜಿಲ್ಲೆಗಳಲ್ಲಿ ಈವರೆಗೆ ಕೊರೊನಾ ಸೋಂಕು ದೃಢಪಟ್ಟಿಲ್ಲ. ಹೀಗಾಗಿ ಆ ಹತ್ತೂ ಜಿಲ್ಲೆಗಳನ್ನು ಹಸಿರು ವಲಯದ ಪಟ್ಟಿಗೆ ಸೇರಿಸಲಾಗಿತ್ತು. ಅಲ್ಲಿನ ಜಿಲ್ಲಾಡಳಿತಗಳು ಕೊಂಚ ನಿರಾಳವಾಗಿದ್ದವು. ಜೊತೆಗೆ ಏಪ್ರಿಲ್ 20ರ ಬಳಿಕ  ಸ್ವಲ್ಪ ಮಟ್ಟಿಗಿನ ರಿಯಾಯತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಆ ಜಿಲ್ಲೆಗಳ ಜನರಿದ್ದರು. ಇದೀಗ ಇವತ್ತು ರಾಜ್ಯ ಸರ್ಕಾರ ಹೊರಡಿಸಿರುವ ಸೂಚನೆ ಆ ಜಿಲ್ಲೆಗಳ ಜನರ ನಿದ್ದೆ ಗೆಡಿಸಿದೆ.

ಜಿಲ್ಲಾಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿಗಳ ಪತ್ರ ಸೋಂಕು ಪತ್ತೆಯಾಗದೇ ಇರುವುದಕ್ಕೆ ಹಾಸನ, ಶಿವಮೊಗ್ಗ, ಚಾಮರಾಜನಗರ, ಹಾವೇರಿ, ಕೋಲಾರ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ರಾಮನಗರ ಹಾಗೂ ಕೊಪ್ಪಳ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸರ್ಕಾರದ  ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಪತ್ರ ಬರೆದಿದ್ದಾರೆ. ತಮ್ಮ ಜಿಲ್ಲೆಗಳಲ್ಲಿ ಈವರೆಗೂ ಯಾವುದೇ ಕೋವಿಡ್ 19 ಪ್ರಕರಣ ಪತ್ತೆಯಾಗದೇ ಇರುವುದು ಸಮಾಧಾನಕರ ಸಂಗತಿಯಾಗಿದೆ.

3 ದಿನಗಳಿಂದ ತೀವ್ರವಾಗಿ ಹೆಚ್ಚುತ್ತಿರುವ ಪ್ರಕರಗಳು
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹಿಡಿತದಲ್ಲಿದೆ ಎಂದುಕೊಳ್ಳುತ್ತಿರುವಾಗಲೇ ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಸೋಂಕಿತ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿವೆ. ಹೀಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹಿರಿಯ ಸಚಿವರು, ತಜ್ಞ ವೈದ್ಯರು ಹಾಗೂ  ಅಧಿಕಾರಿಗಳು ತುರ್ತುಸಭೆಯನ್ನು ನಡೆಸಿ ತಕ್ಷಣ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಒಂದೇ ದಿನ ರಾಜ್ಯದಲ್ಲಿ 44 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳು  ದಿಢೀರ್ ಎಂದು ಹೆಚ್ಚಾಗಿರುವುದು ಸರ್ಕಾರ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳುವಂತೆ ಮಾಡಿವೆ. ಜೊತೆಗೆ ಈ ವರೆಗೆ ಸೋಂಕು ಪತ್ತೆ ಆಗದಿದ್ದ ಜಿಲ್ಲೆಗಳಿಗೆ ಹೊಸ ಸೂಚನೆ ಕೊಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.