ಪತ್ರಿಕೆಗಳ ಜಾಹೀರಾತು ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ 

ಪತ್ರಿಕೆಗಳಿಗೆ ಕಳೆದ ಒಂದು ವರ್ಷದಿಂದ ಬಾಕಿ ಇರುವ ಜಾಹಿರಾತು ಹಣ ಬಿಡುಗಡೆ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ
ಕಾಂಗ್ರೆಸ್ ಮುಖಂಡರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಕಾಂಗ್ರೆಸ್ ಮುಖಂಡರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Updated on

ಬೆಂಗಳೂರು: ಪತ್ರಿಕೆಗಳಿಗೆ ಕಳೆದ ಒಂದು ವರ್ಷದಿಂದ ಬಾಕಿ ಇರುವ ಜಾಹಿರಾತು ಹಣ ಬಿಡುಗಡೆ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ

ಕಾಂಗ್ರೆಸ್ ನಾಯಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಜಾಹಿರಾತು ಹಣ ಬಾಕಿ ಇರುವ ಬಗ್ಗೆ ಗಮನ ಸೆಳೆದರು. ಈ ಕುರಿತು ಬರೆದಿರುವ ಪತ್ರವನ್ನೂ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಅವರು ಸಲ್ಲಿಸಿದರು.

 ಲಾಕ್ ಡೌನ್ ನಿಂದಾಗಿ ಮಾಧ್ಯಮ ಕ್ಷೇತ್ರ ಸಹ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ.  ಜಾಹಿರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಜೊತೆಗೆ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹಿರಾತು ನೀಡುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com