ರಾಜ್ಯ

ಕೊರೋನಾ ವೈರಸ್: ರಾಜ್ಯದಲ್ಲಿ ಮತ್ತೆ 5 ಹೊಸ ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆ

ಕೊರೋನಾ ವೈರಸ್: ರಾಜ್ಯದಲ್ಲಿ ಮತ್ತೆ 5 ಹೊಸ ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಂದ ತತ್ತರಿಸುತ್ತಿರುವ ಕರ್ನಾಟಕದಲ್ಲಿ ಮತ್ತೆ ಐದು ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ.

ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲೇ ಇಂದು ಐದು ಹೊಸ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ‌ 27 ಕ್ಕೆ ಏರಿಕೆ ಆಗಿದೆ. ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಕಲಬುರಗಿ ವೃದ್ಧ  ಬಲಿಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಮತ್ತೆ ಹೊಸ ಐದು ಪ್ರಕರಣಗಳು ಕಲಬುರಗಿಯಲ್ಲೇ ವರದಿ ಆಗಿರುವುದರಿಂದ ಮತ್ತಷ್ಟು ಆತಂಕ ಹೆಚ್ಚಿಸಿದೆ.

ಇಂದು ಪತ್ತೆಯಾದ ಸೋಂಕಿತರೆಲ್ಲರೂ ಕಲಬುರಗಿ ಜಿಲ್ಲೆಗೆ ಸೇರಿದವರಾಗಿದ್ದಾರೆ. ಐವರ ಪೈಕಿ ನಾಲ್ಕು ಮಂದಿ ಗಂಡಸರು ಮತ್ತು ಓರ್ವ ಮಹಿಳೆ ಇಂದು ಸೋಂಕಿಗೆ ತುತ್ತಾಗಿದ್ದಾರೆ. ಇಂದು ಪತ್ತೆಯಾಗಿರುವ ಸೋಂಕಿತರಲ್ಲಿ ಪೇಷೆಂಟ್ ನಂಬರ್ 391 ಪೇಷೆಂಟ್ ನಂಬರ್ (17 ವರ್ಷ) 175ರ  ಸಂಪರ್ಕಕ್ಕೆ ಬಂದು ಕ್ವಾರಂಟೈನ್ ನಲ್ಲಿದ್ದರು. ಅಂತೆಯೇ ಪೇಷೆಂಟ್ ನಂಬರ್ 392, 393 ಮತ್ತು 395 (13 ವರ್ಷದ ಗಂಡು, 30 ವರ್ಷದ ಮಹಿಳೆ ಮತ್ತು 19 ವರ್ಷದ ಗಂಡು ) ಪೇಷೆಂಟ್ ನಂಬರ್ 205ರ ಸಂಪರ್ಕಕ್ಕೆ ಬಂದಿದ್ದರು. ಹೀಗಾಗಿ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೀಗ  ಅವರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದಿದೆ.

ಇನ್ನು ಪೇಷೆಂಟ್ ನಂಬರ್ 394 50 ವರ್ಷದ ಪುರುಷ ಸೋಂಕಿತರು ಪೇಷೆಂಟ್ ನಂಬರ್ 177ರ ಸಂಪರ್ಕಕ್ಕೆ ಬಂದು ಕ್ವಾರಂಟೈನ್ ಆಗಿದ್ದರು.

ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ 27 ಕ್ಕೆ ಏರಿಕೆ
ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲೇ ಇಂದು ಐದು ಹೊಸ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ‌ 27 ಕ್ಕೆ ಏರಿಕೆ ಆಗಿದೆ. ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಕಲಬುರಗಿ ವೃದ್ಧ ಬಲಿಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಮತ್ತೆ ಹೊಸ ಐದು ಪ್ರಕರಣಗಳು ಕಲಬುರಗಿಯಲ್ಲೇ ವರದಿ ಆಗಿರುವುದರಿಂದ ಮತ್ತಷ್ಟು ಆತಂಕ ಹೆಚ್ಚಿಸಿದೆ. ಸದ್ಯ ಸೋಂಕಿತ ಐವರನ್ನು ಕಲಬುರಗಿ ನಗರದ ಇಎಸ್ ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಸ್ಥಳಾಂತರ ‌ಮಾಡಲಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಈಗಾಗಲೇ ಮೂವರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ‌‌.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.