ಪಾದರಾಯನಪುರ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ನಗರದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಪೊಲೀಸ್ ಆಯುಕ್ತ ಭಾಸ್ಕರ್ ರಾವ್
Updated on: 

ಬೆಂಗಳೂರು: ನಗರದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಕರೆದುಕೊಂಡು ಹೋಗುತ್ತಿದ್ದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಎಫ್‌ಐಆರ್‌ ದಾಖಲಾಗಿದೆ ಎಂದರು‌.
ನಾವು ಲಾಠಿಯನ್ನು ತ್ಯಾಗ ಮಾಡಿಲ್ಲ. ಆದರೀಗ ಬಳಸುತ್ತಿಲ್ಲ. ಅವಶ್ಯಕತೆ ಇದ್ದಾಗ ಮಾತ್ರ ಬಳಸುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಾದರಾಯನಪುರ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಖುದ್ಧು ಭಾಸ್ಕರ್ ರಾವ್ ಅವರೇ ಜಗಜೀವನ್ ರಾಂ ನಗರ ಪೊಲೀಸ್ ಠಾಣೆಗೆ ಬಂದು ಪರಿಶೀಲನೆ ನಡೆಸಿದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಅಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದ ಮಾಹಿತಿ ಪಡೆದರು. ಅಂತೆಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಘಟನಾ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಲಾಠಿ ಬಿಟ್ಟು ಕೆಲಸ ಮಾಡುತ್ತಿಲ್ಲ. ಸರ್ಕಾರ ಕೊಟ್ಟಿರುವ ಅಸ್ತ್ರಗಳನ್ನು ಸಂದರ್ಭಕ್ಕೆ ಅನುಸಾರವಾಗಿ ಬಳಸುತ್ತೇವೆ. ಅಂದು ಪರಿಸ್ಥಿತಿ ಸೂಕ್ಷ್ಮವಾಗಿದ್ದರಿಂದ ಲಾಠಿ ಹೆಚ್ಚು ಬಳಸದಂತೆ ಹೇಳಿದ್ದೆ. ಅದು ಎಲ್ಲದ್ದಕ್ಕೂ ಅನ್ವಯ ಆಗೊಲ್ಲ. ಯಾವಾಗ ಬಳಸಬೇಕು ಅವಾಗ ಬಳಸುವ ತರಬೇತಿಯೂ ನಮಗಿದೆ. ಪ್ರಕರಣದಲ್ಲಿ ಯಾರೇ ಇದ್ದರೂ ಬಿಡುವುದಿಲ್ಲ. ಇಂಥ ಘಟನೆ ಬೇರೆ ಕಡೆ ಆಗದಂತೆ ಈಗಾಗಲೇ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com