ಪಾದರಾಯನಪುರ ಗಲಭೆ ಪುಂಡರನ್ನು ರಾಮನಗರಕ್ಕೆ ವರ್ಗಾವಣೆ, ಅನಾಹುತಗಳಾದರೆ ಸರ್ಕಾರವೇ ಹೊಣೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ಕೊರೋನಾ ಸೋಂಕಿನಿಂದ ಮುಕ್ತವಾಗಿರುವ ಹಸಿರು ವಲಯವಾಗಿರುವ ರಾಮನಗರದ ಜೈಲಿನಲ್ಲಿರಿಸುವ ನಿರ್ಧಾರ ಸರಿಯಲ್ಲ. ಕುಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ ಪಾದರಾಯನಪುರ ಪುಂಡರನ್ನು ರಾಮನಗರ ಕಾರಾಗೃಹದಲ್ಲಿ 15ಕ್ಕೂ ಹೆಚ್ಚು ಮಂದಿಯನ್ನು ಒಂದೇ ಕೊಠಡಿಯಲ್ಲಿರಿಸುವ ಮೂಲಕ ಕೊರೋನಾ ಭೀತಿ ಎದುರಾಗಿದೆ. ಜಿಲ್ಲೆಯ ಜನ ಭಯಗೊಂಡಿದ್ದಾರೆ. ಸರ್ಕಾರ ತಕ್ಷಣ ನಿರ್ಧಾರ ಬದಲಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

54 ಮಂದಿ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಾಮನಗರ ಕಾರಾಗೃಹಕ್ಕೆ ವರ್ಗಾಯಿಸುವ ದುಡುಕು ನಿರ್ಧಾರವನ್ನು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ತೆಗೆದುಕೊಂಡಿದ್ದಾರೆ ಎಂದು ಕೇಳಲ್ಪಟ್ಟಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಗೃಹ ಕಾರ್ಯದರ್ಶಿಗಳೊಂದಿಗೆ ದೂರವಾಣಿಯಲ್ಲಿ ಎರಡೆರಡು ಬಾರಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಮತ್ತು ಜನಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಯಾವುದೇ ಪ್ರತಿಭಟನೆಗೆ ಇಳಿಯದಂತೆ ಮನವೊಲಿಸಿದ್ದೇನೆ. ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ರಾಮನಗರ ಕಾರಾಗೃಹದಲ್ಲಿರುವ ಅಡುಗೆಯವರು ಮತ್ತು ಶುಚಿತ್ವ ಸಿಬ್ಬಂದಿ ವಾಸಿಸುತ್ತಿದ್ದು ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ, ಅವರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುವುದು ಬೇಡ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com