

ನವದೆಹಲಿ: ಕೊರೋನಾ ಸೋಂಕು ಹಾಗೂ ಲಾಕ್‌ಡೌನ್ ಅವಧಿ ಮುಗಿಯುವ ಮೊದಲೆ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಹಲವು ರಾಜ್ಯಗಳ ಸಿಎಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ದುಂಬಾಲು ಬೀಳುಲು ಮುಂದಾಗಿದ್ದಾರೆ.
ಸೋಮವಾರ ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಮತ್ತೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ನಿಜ ಹೇಳಬೇಕೆಂದರೆ ಕರ್ನಾಟಕವೂ ಸಹ ಮದ್ಯ ಮಾರಾಟಕ್ಕೆ ಅವಕಾಶ ಮಾಡಿ ಕೊಡಲೇಬೇಕು ಎಂಬ ಒತ್ತಡಕ್ಕೆ ಸಿಲುಕಿದೆ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ಸಿಎಂ ಯಡಿಯೂರಪ್ಪ ಮೇಲಿಂದ ಮೇಲೆ ಅಸಹಾಯಕತೆ ತೋಡಿಕೊಳ್ಳುತ್ತಲೇ ಇದ್ದಾರೆ. ಆದರೆ ಪ್ರಧಾನಿ ಮೋದಿಯಿಂದ ಯಾವುದೇ ರೀತಿ ಒಪ್ಪಿಗೆ ಸಿಗುತ್ತಿಲ್ಲ.