ಪಾದರಾಯನಪುರ ಆರೋಪಿಗಳು ಬೆಂಗಳೂರಿನ‌ ಹಜ್ ಭವನಕ್ಕೆ ಸ್ಥಳಾಂತರ: ಬೊಮ್ಮಾಯಿ

ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ‌ ಹಜ್ ಭವನಕ್ಕೆ ಸ್ಥಳಾಂತರ ಮಾಡಲಾಗುತ್ತಿದ್ದು, ಇದಕ್ಕಾಗಿ ಎಲ್ಲ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಾದರಾಯನಪುರ ಆರೋಪಿಗಳು (ಸಂಗ್ರಹ ಚಿತ್ರ)
ಪಾದರಾಯನಪುರ ಆರೋಪಿಗಳು (ಸಂಗ್ರಹ ಚಿತ್ರ)
Updated on

ಬೆಂಗಳೂರು: ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ‌ ಹಜ್ ಭವನಕ್ಕೆ ಸ್ಥಳಾಂತರ ಮಾಡಲಾಗುತ್ತಿದ್ದು, ಇದಕ್ಕಾಗಿ ಎಲ್ಲ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲಿನ ಸಿಬ್ಬಂದಿಗಳನ್ನು ಪರೀಕ್ಷೆ ಮಾಡಿ ಸೋಂಕು ಕಂಡುಬಂದಲ್ಲಿ ಕ್ವಾರಂಟೈನ್ ಮಾಡಲಾಗುವುದು. ರಾಮನಗರ ಜಿಲ್ಲೆಯ ಜನರು ಭಯ ಪಡುವ ಅಗತ್ಯತೆ ಇಲ್ಲ. ಈಗಾಗಲೇ ಆ ಕೈದಿಗಳನ್ನು ಸ್ಥಳಾಂತರ  ಮಾಡಲಾಗುತ್ತಿದ್ದು, ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದರು.

ರಾಮನಗರ ಜೈಲಿಗೆ ಪಾದರಾಯನಪುರ ಆರೋಪಿಗಳನ್ನು ಸ್ಥಳಾಂತರ ಮಾಡಿದ್ದರಲ್ಲಿ ತಪ್ಪಾಗಿಲ್ಲ. ಇದರಲ್ಲಿ ಯಾರದ್ದೂ ತಪ್ಪಿಲ್ಲ. ಕೊರೊನಾ ಹೋರಾಟದಲ್ಲಿ ಬೇರೆ ಬೇರೆ ಆಯಾಮಗಳು ಕೇಳಿಬರುತ್ತಿವೆ ಎಂದು ಹೇಳುವ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸರ್ಕಾರದ  ನಡೆಯನ್ನು ಸಮರ್ಥಿಸಿಕೊಂಡರು.

ಆರೋಪಿಗಳ ಸ್ಥಳಾಂತರಕ್ಕೆ ಅಡ್ಡಿಯಾಗಿದ್ದ ಮಳೆ
ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರ ದಾಂಧಲೆ ಪ್ರಕರಣದ ಆರೋಪಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಮಳೆ ಅಡ್ಡಿಯಾಗಿತ್ತು. ರಾಮನಗರ ಡಿಪೊದಿಂದ ಬಂದಿದ್ದ‌ 14 ಬಸ್ ಗಳನ್ನು ವಾಪಸ್ ಡಿಪೊಗೆ ಕಳುಹಿಸಲಾಗಿತ್ತು. ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಇರುವ 119  ಆರೋಪಿಗಳನ್ನು ಮತ್ತೆ ಬೆಂಗಳೂರಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಲಾಗಿತ್ತು. ಬೆಂಗಳೂರಿನ ಪಾದರಾಯನಪುರದಲ್ಲಿ ದಾಂಧಲೆ ನಡೆಸಿದ 121 ಆರೋಪಿಗಳನ್ನು ರಾಮನಗರ ಜೈಲಿಗೆ ಇದೇ 21ರಂದು ಸ್ಥಳಾಂತರ ಮಾಡಲಾಗಿತ್ತು. ಅವರಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು  ದೃಢಪಟ್ಟಿದೆ. ಸೋಂಕಿತರಿಬ್ಬರನ್ನು ಗುರುವಾರ ರಾತ್ರಿಯೇ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಸಾಗಿಸಲಾಗಿದೆ. ಉಳಿದವರನ್ನೂ ಹಜ್ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ, ಇದಕ್ಕಾಗಿ ಕೆಎಸ್ ಆರ್ ಟಿಸಿ ರಾಮನಗರ ಘಟಕದ 14 ಬಸ್ಗಳನ್ನು ಬಳಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com