23 ಸಾವಿರ ಮೀನುಗಾರರ 60 ಕೋಟಿ ರೂ. ಸಾಲ ಮನ್ನಾ: ಶ್ರೀನಿವಾಸ ಪೂಜಾರಿ

ಮೀನುಗಾರರ ಸಾಲಮನ್ನಾ ಯೋಜನೆಗೆ ಹಣಕಾಸು ಇಲಾಖೆ 60 ಕೋಟಿ ರೂ ಬಿಡುಗಡೆ ಮಾಡಿದ್ದು, ಇದರಿಂದ 23 ಸಾವಿರ ಮೀನುರಾರರ ಸಾಲ ಮನ್ನಾ ಆಗಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶ್ರೀನಿವಾಸ ಪೂಜಾರಿ
ಶ್ರೀನಿವಾಸ ಪೂಜಾರಿ
Updated on

ಮಂಗಳೂರು: ಮೀನುಗಾರರ ಸಾಲಮನ್ನಾ ಯೋಜನೆಗೆ ಹಣಕಾಸು ಇಲಾಖೆ 60 ಕೋಟಿ ರೂ ಬಿಡುಗಡೆ ಮಾಡಿದ್ದು, ಇದರಿಂದ 23 ಸಾವಿರ ಮೀನುರಾರರ ಸಾಲ ಮನ್ನಾ ಆಗಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಣಕಾಸು ಇಲಾಖೆ ಅಧಿಕೃತವಾಗಿ ಹಣ ಬಿಡುಗಡೆಗೆ ಆದೇಶ ಜಾರಿಯಾಗಿದ್ದು, ಈ ಸಾಲ ಮನ್ನಾ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಈ ಕರೋನದ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಮೀನುಗಾರರ ಪರವಾಗಿ ಕೋಟ ಶ್ರೀನಿವಾಸ ಪೂಜಾರಿ ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com