ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡಿ: ಸರ್ಕಾರಕ್ಕೆ 'ಹೈ' ಸೂಚನೆ

ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ  ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ  ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. 

ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ಪಾದರಾಯನಪುರದಲ್ಲಿ ಹಲ್ಲೆ ನಡೆದ ಘಟನೆ ಹಿನ್ನೆಲೆಯಲ್ಲಿ ಕೋವಿಡ್-19 ಕರ್ತವ್ಯಕ್ಕೆ ತೆರಳುವ ಆರೋಗ್ಯ ಕಾರ್ಯಕರ್ತರು ಹಾಗೂ ಇತರ ಸಿಬ್ಬಂದಿ ಜೊತೆಗೆ ಸ್ಥಲೀಯ ಪರಿಸ್ಥಿತಿಗೆ ಅನುಗುಣವಾಗಿ ಸಶಸ್ತ್ರ ಪೊಲೀಸ್ ಪೇದೆಯೊಬ್ಬರನ್ನು ನಿಯೋಜಿಸುವ ಬಗ್ಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದು ನಿನ್ನೆಯಷ್ಟೇ ಸರ್ಕಾರ ಹೈಕೋರ್ಟ್'ಗೆ ಮಾಹಿತಿ ನೀಡಿದೆ. 

ಈ ಕುರಿತು ವಕೀಲರಾದ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಹೆಚ್ಚುವರಿ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಅವರು ಸಲ್ಲಿಸಿದ್ದ ಲಿಖಿತ ಹೇಳಿಕೆಯಲ್ಲಿ ಮಾಹಿತಿ ನೀಡಿದರು. 

ಪಾದರಾಯನಪುರ ಗಲಭೆ ಸಂಬಂಧ ಜೆಜೆನಗರ ಠಾಣೆಯಲ್ಲಿ ಐದು ಪ್ರತ್ಯೇಕ ಕೇಸ್ ದಾಖಲಿಸಲಾಗಿದ್ದು, 126 ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 6 ಎಸಿಪಿ, 14 ಪೊಲೀಸ್ ಇನ್ಸ್ ಪೆಕ್ಟರ್, 13 ಸಬ್ ಇನ್ಸ್ ಪೆಕ್ಟರ್, 282 ಪೊಲೀಸರು, 5 ಕೆಎಸ್ಆರ್'ಪಿಸಿ, 12 ಸಿಎಆರ್ ತುಕಟಿ ನಿಯೋಜಿಸಲಾಗಿದ ಎಂದು ಸರ್ಕಾರ ತಿಳಿಸಿದೆ. 

ಅದನ್ನು ಪರಿಗಣಿಸಿದ ನ್ಯಾಯಪೀಠ ಆರೋಗ್ಯ ಕಾರ್ಯಕರ್ತು, ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್-19 ಕರ್ತವ್ಯಕ್ಕಾಗಿ ಎಲ್ಲಿಗೆ ತೆರಳುತ್ತಾರೆಂ ಬ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದು, ಅವರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಸಶಸ್ತ್ರ ಪೊಲೀಸರನ್ನು ಭದ್ರತೆಗೆ ಕಳುಹಿಸುವುದು ಸರ್ಕಾರದ ಜವಾಬ್ದಾರಿ. ಆರೋಗ್ಯ ಕಾರ್ಯಕರ್ತರು ಸಹ ತಾವು ಕರ್ತವ್ಯ ನಿರ್ವಹಿಸುವ ಸ್ಥಳದ ಬಗ್ಗೆ ಮೊದಲೇ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಸಲಹೆ ನೀಡಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com