ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಕೊರೋನಾ ಪರೀಕ್ಷಾಲಯ
ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಕೊರೋನಾ ಪರೀಕ್ಷಾಲಯ

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಕೊರೋನಾ ಪರೀಕ್ಷಾ ಪ್ರಯೋಗಾಲಯ

ಕೊರೊನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರಕಾರಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ  ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಶೀಘ್ರ ಕೊರೊನಾ ಪರೀಕ್ಷಾ ಪ್ರಯೋಗಾಲಯ ಪ್ರಾರಂಭವಾಗಲಿದೆ. 

ಬೆಂಗಳೂರು: ಕೊರೊನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರಕಾರಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ  ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಶೀಘ್ರ ಕೊರೊನಾ ಪರೀಕ್ಷಾ ಪ್ರಯೋಗಾಲಯ ಪ್ರಾರಂಭವಾಗಲಿದೆ. ಮೊದಲ ಹಂತವಾಗಿ ಸ್ವಾಬ್‌ ಸಂಗ್ರಹ‌ ಬೂತ್‌ಗಳಿಗೆ ಭಾನುವಾರ ಚಾಲನೆ  ನೀಡಲಾಯಿತು.

ಬೂತ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮತ್ತು ಸಂಸದ ತೇಜಸ್ವಿ ಸೂರ್ಯ ಕಿದ್ವಾಯಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಹಿತರಕ್ಷಣೆ ಮತ್ತು ಸುರಕ್ಷತಾ ದೃಷ್ಟಿಯಿಂದ ಒಳರೋಗಿಗಳನ್ನು ಕೂಡ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುವುದೆಂದು ಎಂದು ಹೇಳಿದರು. ಕೊರೋನಾ ನೆಗೆಟಿವ್ ವರದಿ ಬಂದವರನ್ನು ಮಾತ್ರ ಚಿಕಿತ್ಸೆಗೆ ದಾಖಲಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ರಾಮಚಂದ್ರ ಮಾತನಾಡಿ, ಕಿದ್ವಾಯಿ ಸಂಸ್ಥೆಯಲ್ಲಿ ದಾಖಲಾಗುವ ಒಳರೋಗಿಗಳ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ರೋಗಿಗಳನ್ನು ಮಾತ್ರ ಆಸ್ಪತ್ರೆಯಲ್ಲಿ ಮುಂದಿನ ಉನ್ನತ ಚಿಕಿತ್ಸೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com